More

    ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ ಅಗತ್ಯ, ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅನಿಸಿಕೆ

    ಮಂಗಳೂರು: ಆರ್ಥಿಕ ಸ್ವಾವಲಂಬನೆಯಿಂದ ಮಹಿಳೆಯರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡುತ್ತದೆ. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದ್ದು, ಸಂಘ ಸಂಸ್ಥೆಗಳು ಕೂಡ ಪ್ರೋತ್ಸಾಹ ನೀಡುವುದು ಅವಶ್ಯ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
    ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವತಿಯಿಂದ ಯೆಯ್ಯಡಿಯ ಡಿಐಸಿಎಂ ಸಭಾಂಗಣದಲ್ಲಿ ಬುಧವಾರ ಮಹಿಳೆಯರಿಗೆ ಆಯೋಜಿಸಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಅಧ್ಯಕ್ಷೆ ಚಂದ್ರಕಲಾ ಡಿ.ರಾವ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯದರ್ಶಿ ಸುಮತಿ ದೇವ್‌ದಾಸ್, ರೆಡ್‌ಕ್ರಾಸ್ ಸೊಸೈಟಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಸಂಪನ್ಮೂಲ ವ್ಯಕ್ತಿಗಳಾದ ಶಾಂತಿ ಆಚಾರ್ಯ, ರೇಖಲತಾ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
    ರೆಡ್‌ಕ್ರಾಸ್ ಸೊಸೈಟಿ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಉಪ ಸಮಿತಿ ನಿರ್ದೇಶಕಿ ಡಾ.ಸುಮನಾ ಬೋಳಾರ್ ಸ್ವಾಗತಿಸಿ, ಕಾರ್ಯದರ್ಶಿ ಸಂಜಯ ಶೆಟ್ಟಿ ವಂದಿಸಿದರು. ವಿದ್ಯಾ ರಾಕೇಶ್ ಮತ್ತು ಉಷಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಚಾಕಲೇಟ್ ತಯಾರಿ, ಹಣ್ಣುಗಳ ಜಾಮ್ ಮತ್ತು ಸ್ಕ್ವಾಶ್ ತಯಾರಿ ಬಗ್ಗೆ ಉಚಿತ ತರಬೇತಿ ನೀಡಲಾಯಿತು. 150 ಮಹಿಳೆಯರು ಭಾಗವಹಿಸಿದ್ದರು.

    ————————–
    ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಮಹಿಳೆಯರು ಯಶಸ್ಸು ಸಾಧಿಸಿದ್ದಾರೆ. ಅದಕ್ಕೆ ಪೂರಕ ತರಬೇತಿ, ಆರ್ಥಿಕ ಶಿಸ್ತು, ವ್ಯವಹಾರ ಜ್ಞಾನ ಬೆಳೆಸಿಕೊಳ್ಳಬೇಕು. ಸ್ವ ಉದ್ಯೋಗಕ್ಕೆ ಪೂರಕ ತರಬೇತಿ ಪಡೆಯುವುದರಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಕೂಡ ಆರ್ಥಿಕ ಸ್ವಾವಲಂಬನೆ ಪಡೆಯಬಹುದು.
    ಸಿಎ ಶಾಂತಾರಾಮ ಶೆಟ್ಟಿ
    ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts