ಸಾರಾಯಿ ವಿರುದ್ಧ ಸಿಡಿದೆದ್ದ ಅಡರಕಟ್ಟಿ ಗ್ರಾಮದ ನಾರಿಯರು

Latest News

ಚಿಲ್ಲರೆ ರಾಜಕಾರಣ ನಾ ಮಾಡಲ್ಲ

ಗೊಳಸಂಗಿ: ಚುನಾವಣೆ ವೇಳೆಯಲ್ಲಿ ಮಾತ್ರ ರಾಜಕೀಯ ಮಾಡಬೇಕೇ ಹೊರತು ಎಲ್ಲ ಸಂದರ್ಭಗಳಲ್ಲಿ ಮಾಡಿದರೆ ಅದು ಶೋಭೆ ತರುವುದಿಲ್ಲ. ನಾನು ಚಿಲ್ಲರೆ ರಾಜಕಾರಣ ಮಾಡುವವನೂ...

ಕರ್ನಾಟಕದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಹೆಜ್ಜೆಗುರುತು

|ಡಾ.ಎಸ್.ಆರ್.ಲೀಲಾ ಬಹು ಪ್ರಾಚೀನಕಾಲದಿಂದಲೂ ಭಾರತದೇಶ ಬಹುಭಾಷೆಗಳ ನೆಲೆವೀಡಾಗಿದೆ. ಒಂದೊಂದು ಪ್ರಾಂತದಲ್ಲೂ ಒಂದೊಂದು ನುಡಿ ಹೊಮ್ಮಿ, ಸಾಹಿತ್ಯ ಫಲಪುಷ್ಪಗಳನ್ನೂ ನೀಡಿ ಪಕ್ವವಾಗಿ ಬೆಳೆದಿದೆ. ಹಿಂದೆ ಮಹಾರಾಷ್ಟ್ರಿ,...

ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹೊನ್ನಾವರ: ಸರ್ಕಾರಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿ ಪ್ರಯಾಣಿಕರು ಪಾರಾದ ಘಟನೆ ತಾಲೂಕಿನ ಜನಕಡಕಲ್ ಹೊಸಗದ್ದೆ ಬಳಿ ಶುಕ್ರವಾರ ನಡೆದಿದೆ....

ಗ್ರಾಹಕರಿಗೆ ನ್ಯಾಯ ಒದಗಿಸಲು ಮನವಿ

ಕಾರವಾರ: ಸಮೃದ್ಧ ಜೀವನ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿಯಿಂದ ತೊಂದರೆಗೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಬೇಕು, ಏಜೆಂಟರಿಗೆ ರಕ್ಷಣೆ ನೀಡಬೇಕು ಎಂದು ಸೊಸೈಟಿಯ...

ಸಿದ್ಧೇಶ್ವರ ಬ್ಯಾಂಕಿನ ಗತವೈಭವಕ್ಕೆ ಸಹಕರಿಸಿ

ವಿಜಯಪುರ: ರಾಷ್ಟ್ರೀಕೃತ ಬ್ಯಾಂಕುಗಳಿಲ್ಲದಾಗ ವ್ಯಾಪಾರಸ್ಥರ ಬೆನ್ನಿಗೆ ನಿಂತಿದ್ದು ಸಿದ್ಧೇಶ್ವರ ಬ್ಯಾಂಕ್. ಅದಕ್ಕಾಗಿ ವ್ಯಾಪಾರಸ್ಥರು ರಾಷ್ಟ್ರೀಕೃತ ಬ್ಯಾಂಕುಗಳ ಮೊರೆಹೋಗದೇ ಸಿದ್ಧೇಶ್ವರ ಬ್ಯಾಂಕಿನ ಗತವೈಭವಕ್ಕೆ ಕೈಜೋಡಿಸಿ...

ಲಕ್ಷ್ಮೇಶ್ವರ: ಅಡರಕಟ್ಟಿ ಗ್ರಾಮದಲ್ಲಿ ಅಕ್ರಮ ಸರಾಯಿ ಮಾರಾಟದ ವಿರುದ್ಧ ಸಿಡಿದೆದ್ದ ಮಹಿಳೆಯರು ಕದ್ದುಮುಚ್ಚಿ ಸರಾಯಿ ಮಾರುತ್ತಿದ್ದ ಕಿರಾಣಿ, ಚಹಾ ಅಂಗಡಿ, ಗೂಡಂಗಡಿಗಳ ಮೇಲೆ ದಾಳಿ ನಡೆಸಿ ಸರಾಯಿ ಪಾಕೆಟ್ ನಾಶಪಡಿಸಿದರು.

ಅಡರಕಟ್ಟಿ ಗ್ರಾಪಂ ವ್ಯಾಪ್ತಿಯ ಅಡರಕಟ್ಟಿ ತಾಂಡಾದಲ್ಲಿ ಕಳೆದ ಕೆಲ ದಿನಗಳಿಂದ ಸರಾಯಿ ಮಾರಾಟ ನಿಲ್ಲಿಸಲಾಗಿದೆ. ಸಮೀಪದ ಹರದಗಟ್ಟಿ ಗ್ರಾಮ ಸಾರಾಯಿ ಮುಕ್ತ ಗ್ರಾಮವಾಗಿ ಘೊಷಿಸಲ್ಪಟ್ಟಿದೆ. ಇದರಿಂದ ಅಡರಕಟ್ಟಿ ಗ್ರಾಮದಲ್ಲಿ ಸರಾಯಿ ಮರಾಟ ದಂಧೆ ಹೆಚ್ಚಳವಾಗಿತ್ತು. ಗ್ರಾಮದ ಕೆಲ ಅಂಗಡಿಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆದಿತ್ತು. ವಿಷಯ ಅರಿತ ಮಹಿಳೆಯರು ಅಂಗಡಿಗಳ ಮೇಲೆ ದಾಳಿ ನಡೆಸಿ ಸಾರಾಯಿ ಪಾಕೆಟ್​ಗಳನ್ನು ನಾಶಪಡಿಸಿದ್ದಾರೆ.

‘ಪುರುಷರು, ಯುವಕರು ಕೆಲಸ ಬಿಟ್ಟು ಮನೆಯಲ್ಲಿನ ಸಾಮಾನು, ಕಾಳು-ಕಡಿ ಮಾರಿ ಕುಡಿಯುತ್ತಿದ್ದಾರೆ. ಮಹಿಳೆಯರು ಗ್ರಾಮದಲ್ಲಿ ನಿರ್ಭೀತಿಯಿಂದ ಸಂಚರಿಸುವುದು ದುಸ್ತರವಾಗಿದೆ. ಇದು ಮಕ್ಕಳ ಮನಃಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಗ್ರಾಮದಲ್ಲಿನ ಆರೋಗ್ಯಕರ ವಾತಾವರಣ ಹದಗೆಟ್ಟಿದ್ದು ಸರಾಯಿ ಮಾರಾಟ ನಿಲ್ಲಿಸಲೇಬೇಕೆಂಬ ದೃಢ ನಿರ್ಧಾರದಿಂದ ಈ ಕಾರ್ಯ ನಡೆಸಿದ್ದೇವೆ’ ಎಂದು ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಧರ್ಮಸ್ಥಳ ಸ್ವಸಹಾಯ ಸಂಘದ ಮಹಿಳೆಯರು ತಿಳಿಸಿದ್ದಾರೆ.

ಸುದ್ದಿ ತಿಳಿದು ಗ್ರಾಮಕ್ಕೆ ದೌಡಾಯಿಸಿದ ಪೊಲೀಸರು ಅಕ್ರಮ ಸಾರಾಯಿ ಮಾರುತ್ತಿದ್ದ ಗ್ರಾಮದ ಮಲ್ಲಪ್ಪ ಬಾರಕೇರ, ರಾಮಪ್ಪ ರೊಳ್ಳಿ, ದೇವಪ್ಪ ಭಂಗಿ ಮತ್ತಿರರ ಅಂಗಡಿಗಳ ಮೇಲೆ ದಾಳಿ ಮಾಡಿ ಸರಾಯಿ ಪಾಕೆಟ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮದಲ್ಲಿನ ಸ್ವಸಹಾಯ ಸಂಘಗಳ ಮುಖ್ಯಸ್ಥರು, ‘ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ. ಇಷ್ಟಾಗಿಯೂ ಮತ್ತೆ ಪ್ರಾರಂಭವಾದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

Stay connected

278,675FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...