More

    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅಸ್ತು; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ನೂತನ ಸಂಸತ್

    ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಮಸೂದೆ ಪರ 454 ಸಂಸದರು ಮತ ಚಲಾಯಿಸಿದ್ದಾರೆ. ಇಬ್ಬರೂ ಸಂಸದರು ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮೂಲಕ ನೂತನ ಸಂಸತ್​ ಭವನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

    ನಾರಿಶಕ್ತಿ ಅಧಿನಿಯಂ ಎಂಬ ಮಸೂದೆಯನ್ನು ಲೋಕಸಭೆಯಲ್ಲಿ ಸರ್ಕಾರ ಮಂಗಳವಾರ ಮಂಡಿಸಿತ್ತು. ನೂತನ ಸಂಸತ್​ ಭವನದಲ್ಲಿ ಮಂಡಿಸಲಾದ ಮೊದಲ ಮಸೂದೆ ಇದಾಗಿದೆ. ಮಹಿಳೆಯರಿಗೆ ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್​ ಸಿಂಗ್​ ಮೇಘವಾಲ್​​ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದರು.

    ಈ ಮಸೂದೆಯು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ. 2047ರ ವೇಳೆಗೆ ದೇಶವನ್ನು ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

    ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣ; ನಗರ ಪೊಲೀಸ್​ ಆಯುಕ್ತರ ಕಚೇರಿ ಎದುರು ಸಾಲುಮರದ ತಿಮ್ಮಕ್ಕ ಪ್ರತಿಭಟನೆ

    ಮಹಿಳಾ ಮೀಸಲಾತಿ ಮಸೂದೆಗೆ ಆಡಳಿತ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್​, ಎಸ್​ಪಿ, ಬಿಎಸ್​ಪಿ, ಡಿಎಂಕೆ, ಎನ್​ಸಿಪಿ ಸೇರಿದಂತೆ ಬಹುತೇಕ ಪಕ್ಷಗಳು ಕಾಯ್ದೆಗೆ ಬೆಂಬಲ ಸೂಚಿಸಿವೆ. ಆದರೆ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡುವ ಮೊದಲು ಜನಗಣತಿ, ಡಿಲಿಮಿಟೇಷನ್​ ಅಗತ್ಯತೆಯನ್ನು ಹಲವು ವಿಪಕ್ಷಗಳ ನಾಯಕರು ಪ್ರಶ್ನಿಸಿದ್ದಾರೆ.

    ಮಹಿಳಾ ಮೀಸಲಾತಿ ಮಸೂದೆಗೆ ಎಐಎಂಐಎಂ ಸಂಸದ ಅಸಾದುದ್ದೀನ್​ ಓವೈಸಿ ವಿರೋದಿಸಿದ್ದು, ಇದು ಸವರ್ಣೀಯ ಮಹಿಳೆಯರಿಗೆ ಅವಕಾಶ ನೀಡುತ್ತದೆ ಎಂದು ಆಕ್ಷೇಪಿಸಿದ್ದಾರೆ. ಈ ಸರ್ಕಾರ ಸವರ್ಣಿಯ ಮಹಿಳೆಯರಿಗೆ ಹೆಚ್ಚಿನ ಅವಕಾಶವನ್ನು ನೀಡಲು ಬಯಸಿದ್ದು, ಮುಸ್ಲಿಂ ಹಾಗೂ ಒಬಿಸಿ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡದಿರಲು ನಿರ್ಧರಿಸಿದಂತೆ ಕಾಣುತ್ತಿದೆ.

    ಲೋಕಸಭೆಗೆ ಈವರೆಗೂ 690 ಮಹಿಳಾ ಸಂಸದರು ಆಯ್ಕೆಯಾಗಿದ್ದು, ಅದರಲ್ಲಿ 25ಮಂದಿ ಮಾತ್ರ ಮಸ್ಲಿಂ ಸಮುದಾಯದವರಾಗಿದ್ದಾರೆ. ನಾನೂ ಈ ಕಾನೂನನ್ನು ವಿರೋಧಿಸುತ್ತೇನೆ. ಮಸೂದೆ ಜಾರಿ ಮಾಡಲು ನೀಡುತ್ತಿರುವ ಸಮರ್ಥನೆ ಏನೆಂದರೆ ಹೆಚ್ಚಿನ ಮಹಿಳೆಯರು ಸಂಸತ್ತಿಗೆ ಆಯ್ಕೆಯಾಗಿ ಬರುತ್ತಾರೆಂದು. ಆದರೆ, ಈ ಪ್ರಾತಿನಿಧ್ಯವನ್ನು ಒಬಿಸಿ ಹಾಗೂ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಯಾಕೆ ನೀಡಲಾಗುತ್ತಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್​ ಓವೈಸಿ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts