

Womens World Cup: ಮುಂಬರುವ ಮಹಿಳಾ ಏಕದಿನ ವಿಶ್ವಕಪ್‌ನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ, ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶುಕ್ರವಾರ (ಆಗಸ್ಟ್ 22) ದೃಢಪಡಿಸಿದೆ.
2025ರ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದ ನಂತರ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದರು. ಪೂರ್ವ ನಿಗದಿಯಾಗಿದ್ದ ಮೈದಾನದಲ್ಲಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಪೊಲೀಸರಿಂದ ಅಗತ್ಯ ಅನುಮೋದನೆಗಳನ್ನು ಪಡೆಯುವಲ್ಲಿ ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿಫಲವಾದ ಹಿನ್ನಲೆಯಲ್ಲಿ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಆಯೋಗದ ವರದಿಗಳನ್ನು ಕ್ಯಾಬಿನೆಟ್ ಅನುಮೋದಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಈ ಕ್ರೀಡಾಂಗಣವು ದೊಡ್ಡ ಪ್ರಮಾಣದ ಕಾರ್ಯಕ್ರಮಗಳಿಗೆ ಅಸುರಕ್ಷಿತ ಎಂದು ಪರಿಗಣಿಸಿದ್ದು. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಬಗ್ಗೆ ತನಿಖೆ ನಡೆಸಲು ಆಯೋಗವನ್ನು ಸ್ಥಾಪಿಸಲಾಯಿತು, ಇದರಲ್ಲಿ 11 ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡರು.
ಇದನ್ನೂ ಓದಿ:ಗ್ರಾಮೀಣ ಕ್ರೀಡೆ ಉಳಿಸುವ ಕೆಲಸವಾಗಲಿ
ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಪಂದ್ಯಗಳಿಗೆ ಲಭ್ಯವಿಲ್ಲದ ಕಾರಣ ಸೆಪ್ಟೆಂಬರ್ 30 ರಂದು ಪ್ರಾರಂಭವಾಗುವ ಎಂಟು ತಂಡಗಳ ಟೂರ್ನಮೆಂಟ್‌ನ ಐದು ಸ್ಥಳಗಳಲ್ಲಿ ಬೆಂಗಳೂರಿನ ಬದಲಿಗೆ ನವಿ ಮುಂಬೈ ಸ್ಥಾನ ಪಡೆದಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.(ಏಜೆನ್ಸೀಸ್)