More

    ಹಳ್ಳಿಗಳಿಗೆ ಹಿಂದಿರುಗಿದವರಿಗೆ ಕೆಲಸ ಕೊಡಿ: ಅಧಿಕಾರಿಗಳಿಗೆ ಬಿಎಸ್‌ವೈ ತಾಕೀತು

    ಬೆಂಗಳೂರು: ಕರೊನಾ ಲಾಕ್‌ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಉದ್ಯೋಗ ಖಾತರಿ ಯೋಜನೆಗೆ ರಾಜ್ಯ ಸರ್ಕಾರ 6315.79 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ಕೊಟ್ಟು, ನಿಗದಿತ ಅವಧಿಯಲ್ಲಿ ವೇತನ ಪಾವತಿಸಿ ಎಂದು ಆದೇಶಿಸಿದರು.

    ಇದನ್ನೂ ಓದಿ  ಓಲಾ ಕ್ಯಾಬ್​ ಆರಂಭವಾದರೂ 1,400 ಸಿಬ್ಬಂದಿ ಬೀದಿಗೆ ಬಂದಿದ್ದೇಕೆ?

    ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು.

    ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್‌ವೆಲ್ಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಜೂಮ್ ವಿಡಿಯೋ ಕಾಲ್​ನಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts