More

    ಪೊಲೀಸರಿಗೂ ಮನೆಯಿಂದಲೇ ಕೆಲಸ; ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಹೆಚ್ಚು ಪೊಲೀಸ್​ ಸಿಬ್ಬಂದಿ ಕೋವಿಡ್​ಗೆ ಒಳಗಾಗುತ್ತಿರುವುದರಿಂದ ಠಾಣೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಯನ್ನಷ್ಟೇ ನಿಯೋಜಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

    ಜತೆಗೆ, 50ಕ್ಕೂ ಹೆಚ್ಚು ವಯಸ್ಸಾದ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಬೇಕು. ಕಾನ್​ಸ್ಟೆಬಲ್​ಗಳನ್ನು ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

    ಇದನ್ನೂ ಓದಿ; ಲಾಕ್​ಡೌನ್​ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಿ; ಇಲ್ಲದಿದ್ದರೆ ಮತ್ತೆ ಸಂಕಷ್ಟ; ಸಿಎಂಗೆ ಮನವಿ

    ಕೋವಿಡ್​ ಕಾಯಿಲೆ ಬಂದ ಪೊಲೀಸರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುವಾಗುವಂತೆ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಹಣ ಬಿಡುಗಡೆ ಮಾಡಬೇಕು. ಸಾರ್ವಜನಿಕ ಸ್ಥಳಗಳು, ಕೋವಿಡ್​ ಆಸ್ಪತ್ರೆ, ಸ್ಮಶಾನ ಮೊದಲಾದ ಸೋಂಕಿನ ಅಪಾಯವಿರುವ ಸ್ಥಳಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪಿಪಿಇ ಕಿಟ್​ ನೀಡಬೇಕು ಎಂದು ಹೇಳಿದ್ದಾರೆ.

    ಠಾಣೆಗಳಲ್ಲಿ ಗಾಜಿನ ಕ್ಯಾಬಿನ್​ ಅಳವಡಿಸಿ ದೂರು ಸ್ವೀಕರಿಸಲು ಕ್ರಮಕೈಗೊಳ್ಳಬೇಕು. ಸಿಬ್ಬಂದಿಗೆ ಆಯುಷ್​ ಹಾಗೂ ಇತರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ನೀಡಬೇಕೆಂದು ಹೇಳಿದ್ದಾರೆ.

    ಸೋಮವಾರದಿಂದ ದೇಶದ 12 ಕಡೆಗಳಲ್ಲಿ ಕೋವಿಡ್​ ರೋಗಿಗಳಿಗೆ ದೇಶೀಯ ಕರೊನಾ ಲಸಿಕೆ ಪ್ರಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts