More

    ಗುರಿ ಸಾಧನೆಗೆ ನಿರಂತರ ಶ್ರಮವಹಿಸಿ

    ಕುಶಾಲನಗರ: ವಿದ್ಯಾರ್ಥಿಗಳು ಬದುಕಿನಲ್ಲಿ ಉನ್ನತ ಗುರಿ ಹೊಂದಬೇಕು. ಅದನ್ನು ಸಾಕಾರಗೊಳಿಸಿಕೊಳ್ಳಲು ನಿರಂತರವಾಗಿ ಶ್ರಮಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಹೇಳಿದರು.

    ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

    ಸೋಮವಾರಪೇಟೆ ತಾಲೂಕು ಸಮನ್ವಯಾಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ವಿದ್ಯೆಯೊಂದಿಗೆ ಮಕ್ಕಳ ಕಲೆಯನ್ನು ಅಭಿವೃದ್ಧಿ ಪಡಿಸಲು ಇಂತಹ ಕಾರ್ಯಕ್ರಮಗಳು ಆಯೋಜನೆಗೊಳ್ಳಬೇಕು ಎಂದರು.

    ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿದರು. ಶಾಲೆಯ ಉಪಪ್ರಾಂಶುಪಾಲ ಪರಮೇಶ್ವರಪ್ಪ, ಶಿಕ್ಷಕ ಎ.ಸಿ.ಮಂಜುನಾಥ್, ಶಿಕ್ಷಕಿ ಹೇಮಲತಾ, ಗೋವಿಂದೇಗೌಡ, ಸಿಆರ್‌ಪಿ ಸಂತೋಷ್ ಕುಮಾರ್, ಹಳೇ ವಿದ್ಯಾರ್ಥಿ ಟ್ರಸ್ಟ್ ಅಧ್ಯಕ್ಷ ಶಿವರಾಜ್, ಉ.ರಾ. ನಾಗೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts