More

    ರಾಜಕೀಯ ಸಿದ್ಧಾಂತಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕೆಲಸ

    ಕುಶಾಲನಗರ: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಳ್ಳುವುದರ ಜತೆಗೆ ರಾಜಕೀಯ ಸಿದ್ಧಾಂತಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

    ಯದುವೀರ ಅವರನ್ನು ಕೊಪ್ಪ ಗೇಟ್‌ಬಳಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಆತ್ಮೀಯವಾಗಿ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲು ತಜ್ಞರು, ಅಧಿಕಾರಿಗಳು ಮತ್ತು ಸಾಮಾಜಿಕ ಹೋರಾಟಗಾರರ ಸಲಹೆ ಪಡೆಯಲಾಗುವುದು. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಜಿಲ್ಲೆಯನ್ನು ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು ಎಂದರು.

    ಕೊಡಗು ಜಿಲ್ಲೆಗೂ ರಾಜಮನೆತನಕ್ಕೂ ಅವಿನಾಭಾವ ಸಂಬಂಧವಿದೆ. ಆ ಸಂಬಂಧ ಮತ್ತಷ್ಟು ಗಟ್ಟಿಯಾಗಬೇಕಿದೆ. ರಾಜಕೀಯಕ್ಕೆ ಬರಲು ಕುಟುಂಬದವರ ಸಹಕಾರ, ಬೆಂಬಲ ಇದೆ. ಅವರ ಸಹಕಾರದಿಂದ ನಾನು ನಿಮ್ಮ ಮುಂದೆ ಈ ರೀತಿ ನಿಲ್ಲಲು ಸಾಧ್ಯವಾಗಿದೆ ಎಂದು ತಿಳಿಸಿದರು.

    ಸ್ಥಳೀಯ ಮುಖಂಡರಾದ ಎಂ.ಡಿ.ಕೃಷ್ಣಪ್ಪ, ಕೆ.ಜಿ.ಮನು, ಮನುಕುಮಾರ್ ರೈ, ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಕುಮಾರಿ, ಕುಶಾಲನಗರ ಪುರಸಭೆ ಮಾಜಿ ಅಧ್ಯಕ್ಷ ಬಿ.ಜಯವರ್ಧನ, ಜಿ.ಎಲ್.ನಾಗರಾಜ್, ಡಿ.ಸಿ.ಮಂಜುನಾಥ್, ಅನಂತಕುಮಾರ್, ಪುಷ್ಪಾ ನಾಗೇಶ್, ಇಂದಿರಾ ರಮೇಶ್, ಸೊಸೈಟಿ ಸೋಮಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts