More

    ದುಡಿಮೆಗೆ ತಕ್ಕ ವೇತನ ನೀಡಿ

    ಬೆಳಗಾವಿ : ಸೇವಾ ಭದ್ರತೆ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟಿಸಿದರು.

    ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕರೊನಾ ವೈರಸ್ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ತಡೆಗೆ ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಆದರೂ ಆಶಾ ಕಾರ್ಯಕರ್ತೆಯರಿಗೆ ದುಡಿಮೆಗೆ ತಕ್ಕಂತೆ ವೇತನ ಸಿಗುತ್ತಿಲ್ಲ. ದಿನದ 24 ಗಂಟೆ ಸೇವೆ ಸಲ್ಲಿಸಿದರೂ ಸರ್ಕಾರದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ವರ್ಷಗಳಿಂದ ಸರ್ಕಾರ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

    ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಕೇಂದ್ರ ಸರ್ಕಾರ ಶ್ಲಾಘಿಸಿದೆ. ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದೆ. ಇತರರ ಜೀವ ಉಳಿಸಲು ಮುಂದಾಗಿರುವ ಸೇನಾನಿಗಳು ಸದ್ಯ ಜೀವ ಭಯದಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೂ ಸರ್ಕಾರ ಮಾತ್ರ ತಾನು ನೀಡಿದ ಭರವಸೆ ಈಡೇರಿಸಲು ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸರ್ಕಾರ ತಕ್ಷಣ ಪ್ರೋತ್ಸಾಹಧನ ಹಾಗೂ ಗೌರವಧನ ಸೇರಿಸಿ 12 ಸಾವಿರ ವೇತನ ಬಿಡುಗಡೆ ಮಾಡಬೇಕು. ಸಾಫ್ಟ್‌ವೇರ್ ವ್ಯವಸ್ಥೆ ಸ್ಥಗಿತಗೊಳಿಸಬೇಕು. ಸುರಕ್ಷಿತ ಕಿಟ್ ವಿತರಿಸಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪದಾಧಿಕಾರಿಗಳಾದ ರೂಪಾ ಅಂಗಡಿ, ಗೀತಾ ರಾಯಗೋಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts