More

    ಬೆಳೆ ವಿಮೆ ನೋಂದಣಿಗೆ ಕಾರ್ಯ ಪ್ರಗತಿ

    ಕೋಲಾರ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್​ ಬಿಮಾ ಯೋಜನೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಬೆಳೆ ವಿಮೆ ಜಂಟಿ ಸಮಿತಿ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ವರ್ಷದ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್​, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆಯಲ್ಲಿ ವಿಮಾ ಕಂತು ಕಡಿತ ಮಾಡಿಕೊಂಡೆ ಸಾಲ ನೀಡಲಾಗಿರುತ್ತದೆ. ಹೀಗಾಗಿ ರೈತರು ಬೆಳೆ ವಿಮೆ ಕಂತನ್ನು ಪ್ರತ್ಯೇಕವಾಗಿ ಕಟ್ಟುವ ಅಗತ್ಯವಿರುವುದಿಲ್ಲ ಎಂದು ಮಾಹಿತಿ ನೀಡಿದರು.

    ಮಳೆ ಅಭಾವದಿಂದ ಬಿತ್ತನೆ, ನಾಟಿ ಮಾಡಲು ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುತ್ತದೆ. ಬರ, ಶುಷ್ಕ ಪರಿಸ್ಥಿತಿ, ನೆರೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ಗುಡುಗು- ಮಿಂಚುಗಳಿಂದ ಉಂಟಾಗುವ ಬೆಂಕಿಯ ಅಪಘಾತ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆ ಒದಗಿಸುವುದಾಗಿದೆ ಎಂದರು.

    ಮಳೆಯಾಶ್ರಿತ ಭತ್ತ ಬೆಳೆ ನೋಂದಣಿಗೆ 31ಕ್ಕೆ ಕೊನೆ ದಿನ: ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರ ಒದಗಿಸಲಾಗುತ್ತದೆ. ವಿಮಾ ನೋಂದಣಿ ಪ್ರಗತಿಯಲ್ಲಿದ್ದು, ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ಮಳೆಯಾಶ್ರಿತ ನೆಲಗಡೆಲೆ (ಶೇಂಗಾ) ಬೆಳೆಗೆ ಜುಲೈ 1 ರವರೆಗೆ. ಟೊಮ್ಯಾಟೊ, ಮಳೆಯಾಶ್ರಿತ ತೊಗರಿ, ಮಳೆಯಾಶ್ರಿತ ಭತ್ತ ಬೆಳೆಗಳಿಗೆ ಜು.31ರವರೆಗೆ, ನೀರಾವರಿ ಹಾಗೂ ಮಳೆಯಾಶ್ರಿತ ರಾಗಿ, ನೀರಾವರಿಯಾಶ್ರಿತ ಭತ್ತ, ಮಳೆಯಾಶ್ರಿತ ಹುರಳಿ ಬೆಳೆಗಳಿಗೆ ಆ.16ರವರೆಗೆ ನೋಂದಣಿಗೆ ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

    See also  ಅಧಿಕಾರಿಗಳ ತಂಡದಿಂದ ಬೆಳೆ ಹಾನಿ ಸರ್ವೆ ಕಾರ್ಯ

    ರೈತರು ಹತ್ತಿರದ ಬ್ಯಾಂಕ್​ ಗ್ರಾಮ-1, ಸಾಮಾನ್ಯ ಸೇವಾ ಕೇಂದ್ರಗಳು ಹಾಗೂ ಕರ್ನಾಟಕ- 1ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್​ ಪುಸ್ತಕ, ಮೊಬೈಲ್​ ಸಂಖ್ಯೆ, ್ರೊಟ್ಸ್​ ಐಡಿ, ಆಧಾರ್​ ಸಂಖ್ಯೆಯೊಂದಿಗೆ ಪ್ರಿಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts