More

    ಕಾಂಗ್ರೆಸ್‌ನಿಂದ ದಲಿತರನ್ನು ದಿಕ್ಕು ತಪ್ಪಿಸುವ ಕೆಲಸ

    ರಾಯಚೂರು: ದಲಿತ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಗ್ಯಾರಂಟಿಗಳ ಹೆಸರಿನಲ್ಲಿ ದಲಿತರಿಗೆ ದೊಡ್ಡ ಮೋಸವಾಗುತ್ತಿದ್ದು, ಈ ಸತ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿದರು.
    ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಒಳ ಮೀಸಲಾತಿ ಪರ ಇದ್ದೇನೆ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ನಂತರ ಅಯ್ಯೋ ಅದೆಲ್ಲ ಮಾಡೋಕಾಗಲ್ಲ ಎಂದು ಉಲ್ಟಾ ಹೊಡೆದಿದ್ದರು ಎಂದು ಹೇಳೀದರು.
    ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಮೊದಲು ಜಾರಿಗೆ ತರಲು ಮುಂದಾಗಿದ್ದು ಬಿಜೆಪಿ ಸರ್ಕಾರ. ಆದರೆ ಸರ್ಕಾರ ಪತನಗೊಂಡ ಕಾರಣಕ್ಕೆ ಸಾಧ್ಯವಾಗಿರಲಿಲ್ಲ. ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬೇರೆ ಉದ್ದೇಶಕ್ಕೆ ಬಳಸಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ರೂಪಿಸಿದ್ದು ಕಾಂಗ್ರೆಸ್ ಸರ್ಕಾರ.
    ಆದರೆ ಎಸ್‌ಸಿಪಿ, ಟಿಎಸ್‌ಪಿಗೆ ಮೀಸಲಿಟ್ಟದ 11,500 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ. ಬಜೆಟ್ ಬಳಿಕವೂ 14 ಸಾವಿರ ಕೋಟಿ ರೂ. ಬಳಸಿಕೊಳ್ಳಲು ಮುಂದಾಗಿದೆ. ಅಂಬೇಡ್ಕರ್, ವಾಲ್ಮೀಕಿ, ಆದಿ ಜಾಂಬವ, ಬೋವಿ ಅಭಿವೃದ್ಧಿ ನಿಗಮಗಳಿಗೆ ಸಬ್ಸಿಡಿ ಹಣ ಸಂಪೂರ್ಣ ಕಡಿತಗೊಳಿಸಲಾಗಿದೆ.
    ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ಕಡ್ಡಾಯವಾಗಿ ಮಾಡಬೇಕು. ಅಂದಾಗ ಮಾತ್ರ ಯಾವ ಸಮುದಾಯಗಳಿಗೆ ಏನು ಸೌಲಭ್ಯ ನೀಡಬಹುದು ಎಂದು ಗೊತ್ತಾಗಲಿದೆ. ಆದರೆ ದಲಿತರಿಗೆ ಮೀಸಲಾತಿ ಸಿಗುತ್ತಿಲ್ಲ ಎಂದು ರಾಹುಲ್ ಗಾಂ ಹೇಳುತ್ತಿದ್ದು, ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಬೆರಳಣಿಯಷ್ಟೇ ದಲಿತರನ್ನು ಐಎಎಸ್ ಮಾಡಿದೆಯೇ ಎಂದು ಪ್ರಶ್ನಿಸಿದರು.
    ಈ ಸಂದರ್ಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್, ಮುಖಂಡರಾದ ರವೀಂದ್ರ ಜಲ್ದಾರ್, ಆಂಜಿನೇಯ ಕಡಗೋಲ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts