More

    ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ

    ಸೋಮವಾರಪೇಟೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾಂಗ್ರೆಸ್‌ನ ಜನಕಲ್ಯಾಣ ಯೋಜನೆಗಳಾದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಬೇಕು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ನಾಗರಾಜ್ ಹೇಳಿದರು.

    ನಗರ ಕಾಂಗ್ರೆಸ್ ಸಭೆಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಿದ ಪರಿಣಾಮ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳು ಕಾಂಗ್ರೆಸ್‌ಗೆ ಸಿಕ್ಕಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನಪರ ಆಡಳಿತ ಸಾಧ್ಯ ಎಂಬುದು ಮತದಾರರಿಗೆ ಮನವರಿಕೆಯಾಗಿದೆ. ಭಾವನೆಗಳನ್ನು ಕೆರಳಿಸಿ, ಕೋಮು ಗಲಾಟೆ ಎಬ್ಬಿಸಿ ಇದುವರೆಗೆ ಬಿಜೆಪಿ ಗೆಲವು ಸಾಧಿಸುತ್ತಿತ್ತು ಎಂಬುದನ್ನು ಮತದಾರರಿಗೆ ಕಾರ್ಯಕರ್ತರು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

    ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ.ಆದಂ ಮಾತನಾಡಿ, ಕಾರ್ಯಕರ್ತರು ಪಕ್ಷದ ಜೀವಾಳವಾಗಿದ್ದು, ಕಾಂಗ್ರೆಸ್ ಏಳಿಗೆಗೆ ದುಡಿಯುವ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನಗಳು ದೊರೆಯುತ್ತವೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿರುವುದರಿಂದ ಕಾಂಗ್ರೆಸ್‌ನವರು ಎಂ.ಪಿ.ಗಳಾದರೆ ಉತ್ತಮ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ. ಇದನ್ನು ಮತದಾರರಿಗೆ ಕಾರ್ಯಕರ್ತರು ತಿಳಿಸಬೇಕು ಎಂದು ಹೇಳಿದರು.

    ಸಭೆಯಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್ ಮಾತನಾಡಿದರು. ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಫಿ, ಉಪಾಧ್ಯಕ್ಷ ಜಮೀರ್, ಮುಖಂಡರಾದ ಎನ್.ಎನ್.ರಮೇಶ್, ಲೋಹಿತಾಶ್ವ, ಮೀನಾಕುಮಾರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts