More

    ಕಾರ್ಮಿಕರ ಪ್ರಯಾಣಕ್ಕೆ ರೈಲು ವ್ಯವಸ್ಥೆ – ಸಚಿವ ಸುರೇಶ ಅಂಗಡಿ

    ಬೆಳಗಾವಿ: ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ರೈಲಿನಲ್ಲಿ ಸ್ವರಾಜ್ಯಕ್ಕೆ ಪ್ರಯಾಣ ಮಾಡಬಹುದು. ಆದರೆ, ಅವರ ಕಡ್ಡಾಯ ಆರೋಗ್ಯ ತಪಾಸಣೆ ವಿಚಾರ ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

    ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಯಾಣ ದರವನ್ನು ಆಯಾ ರಾಜ್ಯಗಳೇ ಭರಿಸಬೇಕು ಎಂದರು.

    ಗೃಹ ಇಲಾಖೆ ಆದೇಶದನ್ವಯ ಕಾರ್ಮಿಕರನ್ನು ಮರಳಿ ಅವರ ರಾಜ್ಯಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಉಸ್ತುವಾರಿಗೆ ಕಳುಹಿಸುವ ಮತ್ತು ಸ್ವಾಗತಿಸುವ ರಾಜ್ಯಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಕಾರ್ಯವನ್ನು ಕೇಂದ್ರ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ತಂಡ ಮಾಡಲಿದೆ ಎಂದರು.

    16 ಸಾವಿರ ನೋಂದಣಿ: ಕರ್ನಾಟಕದಿಂದ ರಾಜಸ್ಥಾನಕ್ಕೆ ತೆರಳಲು 16 ಸಾವಿರ ಕಾರ್ಮಿಕರು ಈಗಾಗಲೇ ನೋಂದಣಿ ಮಾಡಿಸಿದ್ದಾರೆ. ರಾಜ್ಯ ಸರ್ಕಾರದಿಂದ ರೈಲ್ವೆ ಇಲಾಖೆಗೆ ಪತ್ರ ಬಂದಿದ್ದು, ಆಯಾ ರಾಜ್ಯಗಳ ಬೇಡಿಕೆಗೆ ಅನುಸಾರ ರೈಲು ಬಿಡಲಾಗುವುದು. ಜತೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಸಭೆಯಲ್ಲಿ ತಿಳಿಸಿರುವಂತೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕಾರ್ಮಿಕರಿಗೆ ಅವಕಾಶ ಇಲ್ಲ. ಆದರೂ, ಈ ಬಗ್ಗೆ ಸಂಪುಟದಲ್ಲಿ ಮತ್ತೊಮ್ಮೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಅಂಗಡಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts