More

    ಉದ್ಯೋಗಸ್ಥ ದಂಪತಿ ಟಾರ್ಗೆಟ್; ಮನೆ ಕಳ್ಳನ ಸೆರೆ

    ಬೆಂಗಳೂರು: ಉದ್ಯೋಗಸ್ಥ ದಂಪತಿ ಕೆಲಸಕ್ಕೆ ತೆರಳಿದ ಬಳಿಕ ಅವರ ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್ 2ನೇ ಹಂತದ ನಿವಾಸಿ ಸುನೀಲ್ ಬಂಧಿತ. 30.15 ಲಕ್ಷ ರೂ. ಮೌಲ್ಯದ 525 ಗ್ರಾಂ ಚಿನ್ನಾಭರಣ, 550 ಗ್ರಾಂ ಬೆಳ್ಳಿ, ಬೈಕ್ ಜಪ್ತಿ ಮಾಡಲಾಗಿದೆ. ಇನ್‌ಸ್ಪೆಕ್ಟರ್ ಎಂ.ಎಲ್. ಗಿರೀಶ್ ನೇತೃತ್ವದ ತಂಡವು ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

    ಬಿಟಿಎಂ ಲೇಔಟ್‌ನಲ್ಲಿ ಕುಟುಂಬದ ಜತೆ ನೆಲೆಸಿದ್ದ ಸುನೀಲ್, ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಸುಲಭವಾಗಿ ಹಣ ಸಂಪಾದನೆ ಮಾಡುವ ಉದ್ದೇಶಕ್ಕೆ ಕಳ್ಳತನಕ್ಕೆ ಇಳಿದಿದ್ದ. ಮೊದಲು ಉದ್ಯೋಗದಲ್ಲಿರುವ ದಂಪತಿ ಮನೆಗಳನ್ನು ಗುರುತಿಸುತ್ತಿದ್ದ. ಬೆಳಗ್ಗೆ ಮನೆ ಬೀಗ ಹಾಕಿಕೊಂಡು ದಂಪತಿ ಕೆಲಸಕ್ಕೆ ತೆರಳಿದ ಮೇಲೆ ಆರೋಪಿ ಕನ್ನ ಹಾಕುತ್ತಿದ್ದ. ಇದೇ ರೀತಿ ಕಳೆದ 2-3 ವರ್ಷಗಳಿಂದ ಮನೆಗಳ್ಳತನ ಕೃತ್ಯ ಎಸಗಿದ್ದ.

    ಕೆಲ ದಿನಗಳ ಹಿಂದೆ ಬಿಟಿಎಂ ಲೇಔಟ್‌ನ ಮನೆಯೊಂದರಲ್ಲಿ ಕಳ್ಳತನ ಕೃತ್ಯ ಎಸಗಿದ್ದ. ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ಸುಳಿವಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು ಸುನೀಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 11 ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts