More

    ಕಾರ್ವಿುಕರ ಕೆಲಸದ ಅವಧಿ ಹೆಚ್ಚಳ ಪ್ರಶ್ನಿಸಿ ಪಿಐಎಲ್

    ಬೆಂಗಳೂರು: ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    ಇದನ್ನೂ ಓದಿ: ಮಳೆಯ ಅಬ್ಬರಕ್ಕೆ ಬೆದರಿದ ರಾಜಧಾನಿ

    ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸಿಜೆ ನೇತೃತ್ವದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಕೆಲಸದ ಅವಧಿ ಹೆಚ್ಚಿಸಲು ಸಾರ್ವಜನಿಕ ತುರ್ತು ಅವಶ್ಯಕತೆ ಏನಿತ್ತು, ಹೆಚ್ಚುವರಿ ಅವಧಿಯ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಲಾಗುವುದೇ, ಕಾರ್ಖಾನೆಗಳಲ್ಲಿ ಕರೊನಾ ಸೋಂಕು ಹರಡದಂತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ಜೂ.5ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.

    ಇದನ್ನೂ ಓದಿ: ಸಂಕಷ್ಟದಲ್ಲಿವೆ ಶಾಪಿಂಗ್ ಮಾಲ್​ಗಳು; ಸಾವಿರಾರು ಜನರ ಉದ್ಯೋಗಕ್ಕೂ ಕುತ್ತು

    ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ತಾಸು ಹಾಗೂ ಒಂದು ವಾರದ ಕೆಲಸದ ಅವಧಿಯನ್ನು 48 ತಾಸುಗಳಿಂದ 60 ತಾಸುಗಳಿಗೆ ಹೆಚ್ಚಿಸಿ ಮೇ 22ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

    ನಗರದ ಬಹುತೇಕ ಕಡೆ ವಿದ್ಯುತ್ ವ್ಯತ್ಯಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts