More

  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ: ಜನವರಿ 20ರಂದು ಅದ್ಧೂರಿ ಪದಗ್ರಹಣ ಕಾರ್ಯಕ್ರಮಕ್ಕೆ ನಿರ್ಧಾರ

  ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜಗತ್​ ಪ್ರಕಾಶ್​ ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇದೇ 20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

  ನಡ್ಡಾ ಅವರ ಪದಾರೋಹಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಜೆ.ಪಿ. ನಡ್ಡಾ ಅವರು 2019 ಜೂನ್​ ನಿಂದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

  ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ, ಕೇಂದ್ರ ಸಚಿವರು, ಮುಖಂಡರು ಮತ್ತು ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

  ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಈ ಕಾರ್ಯಕ್ರಮ ನಡೆಯಲಿರುವುದು ಬಿಜೆಪಿಗೆ ಬಲ ತರಲಿದೆ ಎನ್ನಲಾಗಿದೆ. 70 ಕ್ಷೇತ್ರವುಳ್ಳ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 8ರಂದು ನಡೆಯಲಿದ್ದು, ಫೆ.11ಕ್ಕೆ ಫಲಿತಾಂಶ ಹೊರಬೀಳಲಿದೆ. (ಏಜೆನ್ಸೀಸ್​)

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts