More

    ನಿರಂತರ ಜ್ಯೋತಿಯಲ್ಲಿ ಭಾರಿ ಅವ್ಯವಹಾರ

    ಶಿವಮೊಗ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನá-ಷ್ಠಾನದಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸರ್ಕಾರದ ಹಣವೆಂದರೆ ಎಲ್ಲರಿಗೂ ಹಬ್ಬವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಗರಂ ಆದರು.

    ಡಿಸಿ ಕಚೇರಿಯಲ್ಲಿ ಸೋಮವಾರ ನಿರಂತರ ಜ್ಯೋತಿ ಯೋಜನೆ ಅನುಷ್ಠಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯಾವ ಕಾಮಗಾರಿಗಳನ್ನೂ ಪರಿಶೀಲಿಸದೆ ಬಿಲ್ ಪಾವತಿಸಲಾಗಿದೆ. ಪ್ರತಿ ಫೀಡರ್​ನಲ್ಲೂ ತಲಾ ಕೋಟಿ ರೂ. ಅವ್ಯವಹಾರವಾಗಿದೆ. ಇದುವರೆಗೆ 68 ಫೀಡರ್​ಗಳಿಗೆ ಹಣ ನೀಡಿದ್ದು ಎಷ್ಟು ಅವ್ಯವಹಾರ ನಡೆದಿದೆ ಎಂಬುದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್​ಕುಮಾರ್ ಮಿಶ್ರಾಗೆ ಸೂಚಿಸಿದರು.

    ಅಧಿಕಾರಿಗಳು ಕಾಮಗಾರಿ ಮತ್ತು ಸ್ಥಳ ಪರಿಶೀಲಿಸುತ್ತಿಲ್ಲ. ರೈತರಿಗೆ ಅನುಕೂಲ ಮಾಡುವುದಕ್ಕಿಂತ ಕಡತಗಳಿಗೆ ಸಹಿ ಹಾಕುವುದೇ ದೊಡ್ಡ ಕೆಲಸ ಎಂದು ಇಂಜಿನಿಯರ್​ಗಳು ಭಾವಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಫೀಡರ್​ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆ ಸರಿಯಾಗಿ ಲೆಕ್ಕ ಇಲ್ಲ. ಪ್ರತಿ ಕಂಬಗಳಿಗೂ ಸಂಖ್ಯೆ ನಮೂದಿಸಿಲ್ಲ. ಅಧಿಕಾರಿಗಳು ಎಲ್ಲ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸುತ್ತಿಲ್ಲ. ಕೆಲಸ ನಿರ್ವಹಿಸಿದ ಕಾರ್ವಿುಕರಿಗೆ ಸರಿಯಾದ ವೇತನ ಮತ್ತು ಭವಿಷ್ಯ ನಿಧಿ ಸೌಲಭ್ಯ ನೀಡದಿರುವ ಬಗ್ಗೆ ದೂರು ಬಂದಿದ್ದು ಈ ಕುರಿತು ಪರಿಶೀಲಿಸಿ ಎಲ್ಲ ಕಾರ್ವಿುಕರಿಗೆ ಸರಿಯಾಗಿ ವೇತನ ಮತ್ತಿತರ ಸೌಲಭ್ಯ ಒದಗಿಸಬೇಕು. ಗುತ್ತಿಗೆದಾರನ ಯಾವುದೇ ಬಿಲ್ಲುಗಳನ್ನು ಅನುಮೋದಿಸದೆ ತಡೆಹಿಡಿಯಬೇಕು. ಮಾರ್ಗಸೂಚಿಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಠಾನಗೊಳಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ತಾಕೀತು ಮಾಡಿದರು.

    ಡಿಸಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಮೆಸ್ಕಾಂ ತಾಂತ್ರಿಕ ನಿರ್ದೇಶಕಿ ಪದ್ಮಾವತಿ, ಮುಖ್ಯ ಅಧೀಕ್ಷಕ ಇಂಜಿನಿಯರ್ ಶಿವಪ್ರಸಾದ್ ಸೇರಿ ಹಿರಿಯ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts