ಬದುಕಿನ ಮೌಲ್ಯ ಅರಿತು ಅಳವಡಿಕೆ : ಕೆ.ರಾಜು ಮೊಗವೀರ ಹೇಳಿಕೆ

New Project (26)
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಮಕ್ಕಳು ಪರೀಕ್ಷೆಗಾಗಿ ಮಾತ್ರ ಓದದೆ ಬದುಕಿನ ಮೌಲ್ಯ ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರ ಅಧ್ಯಯನಶೀಲರಾಗಬೇಕು. ಶಿಕ್ಷಕರೂ ಮಕ್ಕಳಿಗೆ ಮಾನವೀಯ ಮೌಲ್ಯ ಕಲಿಸಲು ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಕೆ.ರಾಜು ಮೊಗವೀರ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ ನೆಹರು ಚಿಂತನ ಕೇಂದ್ರದ ವತಿಯಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕೃತ ಯೋಜನೆಗೆ ಒಳಪಡುವ ಶಾಲೆಗಳಿಗೆ ಹತ್ತು ದಿನ ಕಾಲ ನಡೆಯಲಿರುವ ವಿಷಯಾಧಾರಿತ ತರಬೇತಿ ಕಾರ್ಯಾಗಾರ ‘ಬಾಲವಿಕಾಸ-2025’ವನ್ನು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಮುಖ್ಯಶಿಕ್ಷಕಿ ಮೋಹಿನಿ ಮಾತನಾಡಿದರು. ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಕಡೆಂಜ ಸೋಮಶೇಖರ್ ಚೌಟ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾಲಯ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿ ರಕ್ಷಿತ್ ಹಾಗೂ ಜೀವಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕಿ ಡಾ.ಲವೀನಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಸದಸ್ಯ ದುರ್ಗಾಪ್ರಸಾದ್ ರೈ ಕಲ್ಲಾಯಿ, ನೆಹರು ಚಿಂತನ ಕೇಂದ್ರದ ಸಂಶೋಧನ ಸಹಾಯಕಿ ಡಾ.ನಯನ ಕೃಷ್ಣಾಪುರ, ಸಂಧ್ಯಾ, ಶಿಕ್ಷಕರಾದ ಕುಮುದ, ತ್ಯಾಗಮ್ ಹರೇಕಳ, ಶಿವಣ್ಣ, ಸ್ಮಿತಾ ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷಕ ಶಿವಣ್ಣ ಸ್ವಾಗತಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಮ್ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡು ಅತ್ಯುತ್ತಮ ವಿದ್ಯಾರ್ಥಿಗಳಾಗಿ ಮೂಡಿಬರಬೇಕು. ಮಂಗಳೂರು ವಿಶ್ವವಿದ್ಯಾಲಯ, ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ, ಮೌಲ್ಯಾಧಾರಿತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಈ ದೃಷ್ಟಿಯಲ್ಲಿ ‘ಬಾಲವಿಕಾಸ’ ಎನ್ನುವ ತರಬೇತಿ ಕಾರ್ಯಾಗಾರ ಅರ್ಥಪೂರ್ಣ. ಮೋಹಿನಿ, ಮುಖ್ಯಶಿಕ್ಷಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net