ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದಲ್ಲಿ ಕಾರ್ಯಾಗಾರ

BLM (4)
Published on

ಶಿರ್ವ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿ ಅಧ್ಯಾಪಕ ಘಟಕವು ಆಂತರಿಕ ಗುಣಮಟ್ಟ ಕೋಶದ ಸಹಯೋಗದೊಂದಿಗೆ ಸ್ಮಾರ್ಟ್ ಬೋಧನೆ ಮತ್ತು ಗುಣಮಟ್ಟದ ಕಲಿಕೆ ಕೃತಕ ಬುದ್ಧಿಮತ್ತೆ ಮತ್ತು ಫಲಿತಾಂಶ ಆಧಾರಿತ ಶಿಕ್ಷಣ ಎಂಬ ವಿಷಯದ ಕುರಿತು ಐದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಡಾ.ಕೆ.ಎಸ್ ಸೌಮ್ಯರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯನ್ನು ಅನ್ವೇಷಿಸುವಂತೆ ತಿಳಿಸಿದರು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ನಾಗರಾಜ್ ಭಟ್ ಮಾತನಾಡಿದರು. ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರೊ.ಡಾ.ರಾಧಾಕೃಷ್ಣ ಎಸ್.ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದಲ್ಲಿ ಡೀನ್‌ಗಳು, ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net