ಹಟ್ಟಿಯಂಗಡಿ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

gan-2
Published on

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭಾಷಾ ಕೌಶಲ ಅಭಿವೃದ್ಧಿ ಕುರಿತು ನಾಲ್ಕು ದಿನಗಳ ವಿಶೇಷ ಕಾರ್ಯಾಗಾರ ನಡೆಯಿತು.

ಶಿಕ್ಷಣ ತಜ್ಞೆ ಹಾಗೂ ಯೋಗ ಥೆರಪಿಸ್ಟ್ ಜಯಶ್ರೀ, ವ್ಯಕ್ತಿತ್ವ ವಿಕಸನ ಹಾಗೂ ಸಮರ್ಥ ಅಭಿವ್ಯಕ್ತಿ ತಂತ್ರಗಳ ಮೇಲೆ ಪ್ರಾಯೋಗಿಕ ತರಬೇತಿ ನೀಡಿದರು. ಶಿಕ್ಷಕರಲ್ಲಿ ಸಮರ್ಥ ಸಂವಹನ ಕೌಶಲ ಬೆಳೆಸುವುದು, ಭಾಷೆ ಪ್ರಾಮುಖ್ಯತೆ ಹಾಗೂ ಶಿಕ್ಷಕರ ಪಾತ್ರ ಎಷ್ಟು ಮಹತ್ವಪೂರ್ಣ ಎಂಬುದರ ಮಾಹಿತಿ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿತ್ತು ಎಂದು ತಿಳಿಸಿದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲ ಶರಣ ಕುಮಾರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿಯರು ಕಾರ್ಯಾಗಾರ ಕುರಿತು ತಮ್ಮ ಅನುಭವ ಹಂಚಿಕೊಂಡರು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಂ. ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಸದಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net