ಅಥ್ಲೇಟಿಕ್ಸ್ ಕ್ರೀಡೆ ಕುರಿತ ಕಾರ್ಯಾಗಾರ, ಬದಲಾದ ನಿಯಮ-ಕೌಶಲಗಳ ಅರಿವು ಮುಖ್ಯ ಎಂದ ಪ್ರೊ. ಶಾಂತಾದೇವಿ

KSWU ATHLETIC WORKSHOP
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಥ್ಲೇಟಿಕ್ಸ್ ಕ್ರೀಡೆ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಉದ್ಘಾಟಿಸಿದರು. ಮುರುಗೇಶನ್ ದೊಡ್ಡಬಳ್ಳಾಪುರ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಮತ್ತಿತರರಿದ್ದಾರೆ.
Published on

ವಿಜಯಪುರ: ದೈಹಿಕ ಶಿಕ್ಷಣ ವಿಭಾಗವು ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ, ಆ ಕ್ರೀಡೆಗಳಲ್ಲಿ ಬದಲಾಗುತ್ತಿರುವ ನಿಯಮಗಳು ಮತ್ತು ನವೀನ ಕೌಶಲಗಳ ಕುರಿತು ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.

ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಥ್ಲೇಟಿಕ್ಸ್ ಕ್ರೀಡೆ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಕಾರ್ಯಾಗಾರಗಳು ತರಬೇತಿ ಪಡೆಯುವ ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮುಖ್ಯ ಸಹಾಯವಾಗುತ್ತಿದೆ ಎಂದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮುರುಗೇಶನ್ ದೊಡ್ಡಬಳ್ಳಾಪುರ, ಮುಖ್ಯ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಭಾಗವಹಿಸಿದ್ದರು.

ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ, ದೈಹಿಕ ಶಿಕ್ಷಣ ವಿಭಾಗದ ಎಲ್ಲ ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬದಿ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಸ್ವಾಗತಿಸಿದರು ಹಾಗೂ ಪ್ರೊ.ಜ್ಯೋತಿ ಉಪಾದ್ಯೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net