More

    ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಲಿ

    ಹುಬ್ಬಳ್ಳಿ : ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡು, ಅಧ್ಯಯನ ಶೀಲರಾಗಬೇಕು ಎಂದು ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಹೇಳಿದರು.

    ಇಲ್ಲಿನ ಲಿಂಗರಾಜ ನಗರದ ಆದರ್ಶ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ 3 ದಿನಗಳ ವಿಜ್ಞಾನ ಮತ್ತು ಗಣಿತ ವಿಷಯಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳು ಈ ಹಂತದಲ್ಲಿ ಮಾಡುವ ಸಾಧನೆ ಮುಂದಿನ 60 ವರ್ಷಗಳ ಜೀವನವನ್ನು ಚೆನ್ನಾಗಿ ಇಟ್ಟಿರುತ್ತದೆ. ಚಂಚಲ ಮನಸನ್ನು ನಿಗ್ರಹಿಸಿ, ಓದಿನ ಕಡೆ ಗಮನಹರಿಸಿದಾಗ ಉತ್ತಮವಾದದ್ದನ್ನು ಸಾಧಿಸಬಹುದು ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಎಸ್.ಬಿ. ಕುನ್ನೂರ, ನಿಜವಾದ ಶಿಕ್ಷಣ ವಿದ್ಯಾರ್ಥಿಯನ್ನು ಪರಿವರ್ತಿಸುವಂತಿರುತ್ತದೆ. ಜೀವನದಲ್ಲಿ ಶಿಸ್ತು ಮುಖ್ಯ. ವಿದ್ಯಾರ್ಥಿಗಳು ಶಿಸ್ತು, ಶ್ರದ್ಧೆ, ದೃಢ ಸಂಕಲ್ಪದಿಂದ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.

    ಮಹಾವಿದ್ಯಾಲಯದ ಅಧ್ಯಕ್ಷ ಲಿಂಗರಾಜ ಪಾಟೀಲ, ಏಕಾಗ್ರಚಿತ್ತದಿಂದ ಅಧ್ಯಯನ ಮಾಡಿದರೆ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ಪಡೆಯಬಹುದು. ಇದರಿಂದ ಜಿಲ್ಲೆಯ, ರಾಜ್ಯದ ಫಲಿತಾಂಶವು ಉನ್ನತ ರೂಪದಲ್ಲಿ ಹೊರಬೀಳುತ್ತದೆ ಎಂದರು.

    ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಬಿ.ಸಿ.ಗೌಡರ ಅವರು ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು.

    ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಾವಕಾರ, ನಿರ್ದೇಶಕ ಪ್ರೊ. ಡ್ಯಾನಿಯಲ್ ಹೊಸಕೇರಿ ಹಾಗೂ ಇತರರು ಉಪಸ್ಥಿತರಿದ್ದರು.

    ಪ್ರಾಚಾರ್ಯ ಕೃಷ್ಣ ಜೋಶಿ ಸ್ವಾಗತಿಸಿದರು. ಸುನಂದಾ ಮೆಣಸಿನಕಾಯಿ ನಿರೂಪಿಸಿದರು. ಉಪನ್ಯಾಸಕಿ ರಾಜೇಶ್ವರಿ ಹಿರೇಗೌಡರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts