More

    ಏಡ್ಸ್ ನಿಯಂತ್ರಣದಲ್ಲಿ ಉಡುಪಿ ಮೊದಲ ಸ್ಥಾನ, ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ

    ಉಡುಪಿ: ಜಿಲ್ಲೆಯು ಏಡ್ಸ್ ಸೋಂಕು ನಿಯಂತ್ರಣದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಸಾರ್ವಜನಿಕರಲ್ಲಿ ಏಡ್ಸ್ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಬೇಕಿದ್ದು, ಏಡ್ಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

    ಮಂಗಳವಾರ ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಸಂಘ ಸಂಸ್ಥೆ ಆಶ್ರಯದಲ್ಲಿ ಎಚ್‌ಐವಿ ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಏಡ್ಸ್ ನಿಯಂತ್ರಣ ಕಾರ‌್ಯಕ್ರಮದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ‌್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಪ್ರೇಮಾನಂದ ಉಪಸ್ಥಿತರಿದ್ದರು.

    ವಿಶ್ವ ಏಡ್ಸ್ ದಿನದ ಪ್ರಯುಕ್ತ ಸರ್ವೀಸ್ ಬಸ್ ನಿಲ್ದಾಣದಿಂದ ಕೆ.ಎಂ. ಮಾರ್ಗವಾಗಿ ಪುರಭವನದವರೆಗೆ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಹಸಿರು ನಿಶಾನೆ ತೋರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts