

ಮಂಡ್ಯ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಾಥಕ್ಕೆ ನಗರದ ಜೆ.ಸಿ ವೃತ್ತದಲ್ಲಿ ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಡಿ.ಜಿ.ಕಿರಣ್ ಚಾಲನೆ ನೀಡಿದರು. ಮಾನಸಿಕ ರೋಗ ತಜ್ಞ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಆರ್.ಶಶಿಧರ್, ಮಿಮ್ಸ್‌ನ ಮನೋರೋಗ ತಜ್ಞ ಡಾ.ಎಚ್.ವಿ.ಶಶಾಂಕ್, ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ.ಲೋಕೇಶ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್.ಆಶಾಲತಾ, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಮಂಗಳಾ ಇತರರಿದ್ದರು.