ಕಡಬದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

tobaco
Published on

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಕಡಬ ವಲಯದ ವತಿಯಿಂದ ಕಡಬ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ರೈ ಮೈಲೇರಿ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ಜೆಎಂಜೆ ಆಸ್ಪತ್ರೆಯ ವೈದ್ಯೆ ಡಾ.ಯೇಲ್ಸಿ ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಮಾಹಿತಿ ನೀಡಿದರು. ಕಡಬ ವಲಯ ಒಕ್ಕೂಟದ ವಲಯಾಧ್ಶಕ್ಷ ರಮೇಶ್ ರೈ ಅರ್ಪಾಜೆ ಅಧ್ಶಕ್ಷತೆ ವಹಿಸಿದ್ದರು. ಕಡಬ ಒಕ್ಕೂಟದ ಅಧ್ಶಕ್ಷೆ ನಳಿನಿ ರೈ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಸವಿತಾ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ವನಿತಾ ರೈ ವಂದಿಸಿದರು. ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net