ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್, ದಾಕುಹಿತ್ಲು ಗಂಗೊಳ್ಳಿ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಆಶ್ರಯದಲ್ಲಿ ಗಂಗೊಳ್ಳಿಯ ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ, ಗರ್ಭಿಣಿ, ಬಾಣಂತಿಯರಿಗೆ ವಿಶ್ವ ಸ್ತನ್ಯಪಾನ ಸಪ್ತಾಹ, ಆಯುಷ್ಮಾನ್ ಮಾಹಿತಿ, ಡೆಂಘೆ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಗಂಗೊಳ್ಳಿ ರಥಬೀದಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ರೋಟರಿ ಅಧ್ಯಕ್ಷ ಚಂದ್ರಕಲಾ ಸುರೇಶ್ ತಾಂಡೆಲ್ ಅಧ್ಯಕ್ಷತೆ ವಹಿಸಿದ್ದರು. ಡೆಂಘೆ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕರಪತ್ರ ಬಿಡುಗಡೆಗೊಳಿಸಲಾಯಿತು. ಆಯುಷ್ಮಾನ್ ಮಿತ್ರ ಸುಜನ್ಮಾಲಾ ಆಯುಷ್ಮಾನ್ ಕಾರ್ಯಕ್ರಮಗಳ ಬಗ್ಗೆ ಹಾಗೂ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಪ್ರಜ್ವಲಾ ಡೆಂಘೆ ಮತ್ತು ಸ್ತನ್ಯಪಾನದ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫರ್ನಾಂಡಿಸ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ ಖಾರ್ವಿ, ರೇಣುಕಾ, ಭಾಗ್ಯ, ಕಾವೇರಿ ಮೊದಲಾದವರು ಉಪಸ್ಥಿತರಿದ್ದರು.