ಮಂಡ್ಯ: ಇತ್ತೀಚಿನ ದಿನದಲ್ಲಿ ಕ್ಯಾನ್ಸರ್ ಹಲವರನ್ನು ಕಾಡುತ್ತಿರುವ ಮಾರಕ ರೋಗವಾಗಿದೆ. ಆದಾಗ್ಯೂ ಯಾವುದೇ ರೀತಿಯ ಕ್ಯಾನ್ಸರ್ ಆದರೂ ಆರಂಭಿಕ ಹಂತದಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಸಲಹೆ ನೀಡಿದರು.
ನಗರದ ಸರ್ಕಾರಿ ಮಹಿಳಾ ಕಾಲೇಜಿ(ಸ್ವಾಯತ್ತ)ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಯುಆರ್ ರೆಡ್‌ಕ್ರಾಸ್ ಘಟಕ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು(ಸ್ವಾಯತ್ತ) ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಹಾಗೂ ಅದರ ತಡೆಗಟ್ಟುವಿಕೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರು ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜನ್ಮದಿನ ಆಚರಣೆ ಸಂದರ್ಭದಲ್ಲಿ ಉಡುಗೊರೆ ಕೊಡುವ ಬದಲು ಆರೋಗ್ಯ ತಪಾಸಣೆ ಕಾರ್ಡ್ ಕೊಡಿ. ಕ್ಯಾನ್ಸರ್ ಕಾಯಿಲೆ ಪತ್ತೆಗೆ ಹೊಸ ತಂತ್ರಜ್ಞಾನ ಬಂದಿದೆ. ಜತೆಗೆ ಕಾಯಿಲೆ ಗುಣಪಡಿಸಲು ಔಷಧಿಯೂ ಲಭ್ಯವಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಕ್ಯಾನ್ಸರ್ ಬರುತ್ತಿದೆ. ಆದರೂ ಯಾರು ಭಯಪಡುವುದು ಬೇಡ. ಕ್ಯಾನ್ಸರ್ ಬಗ್ಗೆ ತಿಳಿವಳಿಕೆ ಮುಖ್ಯ. ರೆಡ್‌ಕ್ರಾಸ್ ಸೊಸೈಟಿ ಭಾರತದಲ್ಲಿ ನೆಲೆಗೊಂಡಿರುವ ಮಾನವ ಜೀವನ ಮತ್ತು ಆರೋಗ್ಯವನ್ನು ರಕ್ಷಿಸಲು ಸ್ವಯಂಪ್ರೇರಿತ ಮಾನವೀಯ ಸಂಘಟನೆಯಾಗಿದೆ. ಇಂತಹ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾಗಿರುವುದಕ್ಕೆ ವಿದ್ಯಾರ್ಥಿಗಳು ಹೆಮ್ಮೆ ಪಡಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಡಾ.ಎನ್.ಸಿ.ವೇಣುಗೋಪಾಲ್ ಕ್ಯಾನ್ಸರ್ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕರಾದ ಟಿ.ನಾರಾಯಣಸ್ವಾಮಿ, ಮಂಗಲ ಯೋಗೇಶ್, ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗುರುರಾಜ್‌ಪ್ರಭು, ಯುವ ರೆಡ್‌ಕ್ರಾಸ್ ಸಂಚಾಲಕ ಎಸ್.ನವೀನ, ದೈಹಿಕ ಶಿಕ್ಷಣ ನಿರ್ದೇಶಕ ಕೆ.ಆರ್.ಲೋಕೇಶ್, ಪತ್ರಾಂಕಿತ ವ್ಯವಸ್ಥಾಪಕಿ ಎಸ್.ಪಿ.ಹೇಮಲತಾ ಇದ್ದರು.
ಜನರನ್ನು ಕಾಡುತ್ತಿರುವ ಕ್ಯಾನ್ಸರ್ ರೋಗ: ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಆತಂಕ

You Might Also Like
ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem
Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…
ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking
Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…
ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti
Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…