ವಿಶ್ವ ಚೆಸ್​ ಚಾಂಪಿಯನ್​​ಶಿಪ್​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ Gukesh

Gukesh
Published on

ನವದೆಹಲಿ: ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್​ ಚಾಂಪಿಯನ್​​ಶಿಪ್​ನಲ್ಲಿ (World Chess Championship) ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ (Gukesh) ಚಾಂಪಿಯನ್​​ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್​ ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ.

18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಮತ್ತು 32 ವರ್ಷ ವಯಸ್ಸಿನ ಹಾಲಿ ಚಾಂಪಿಯನ್‌ ಲಿರೆನ್‌ ನಡುವೆ ನಡೆದ 13 ಪಂದ್ಯಗಳು ಡ್ರಾ ಆಗಿದ್ದವು. ಆ ಮೂಲಕ ಇಬ್ಬರೂ ತಲಾ 6.5 ಅಂಕಗಳೊಂದಿಗೆ ಸಮಬಲ ಸಾಧಿಸಿದ್ದರು.  14ನೇ ಗೇಮ್​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net