More

    ‘ಈ ಸಲ ಕಪ್ ನಮ್ದೇ’ ; ಇತಿಹಾಸ ಸೃಷ್ಟಿಸಲು ಉತ್ಸುಕರಾಗಿರುವ ರೋಹಿತ್​ ಪಡೆ, 20 ವರ್ಷಗಳ ನಂತರ ಸೇಡು ತೀರಿಸಿಕೊಳ್ಳುವ ಚಾನ್ಸ್…

    ನವದೆಹಲಿ: ವಿಶ್ವಕಪ್ 2023 ರ ಅಂತಿಮ ಪಂದ್ಯಕ್ಕಾಗಿ ಭಾರತ ತಂಡ ಗುರುವಾರ ಅಹಮದಾಬಾದ್ ತಲುಪಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಸದ್ಯಕ್ಕೆ ಉತ್ತಮ ಫಾರ್ಮ್‌ನಲ್ಲಿದೆ. ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್ ಗಳಿಂದ ಸೋಲಿಸುವ ಮೂಲಕ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ. 

    ಪ್ರಸಕ್ತ ಟೂರ್ನಿಯಲ್ಲಿ ಭಾರತ ತಂಡ ಮಾತ್ರ ಇದುವರೆಗೆ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಭಾರತ ತಂಡ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿದೆ. ಗುರುವಾರ ಈಡನ್ ಗಾರ್ಡನ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾವನ್ನು ಭಾರತವು ಫೈನಲ್‌ನಲ್ಲಿ ಎದುರಿಸಲಿದೆ.

    ಫೈನಲ್ ಯಾವಾಗ ಮತ್ತು ಎಲ್ಲಿ ನಡೆಯಲಿದೆ? 
    ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ರ ಅಂತಿಮ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ನೇರಪ್ರಸಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ನಡೆಯಲಿದೆ. ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಸತತ 8 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.

    ಅಹಮದಾಬಾದ್‌ನಲ್ಲಿ ಟೀಮ್ ಬಸ್‌ನಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಆಟಗಾರರು ಕಾಣಿಸಿಕೊಂಡರು. ಮೊಹಮ್ಮದ್ ಶಮಿ, ನಾಯಕ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಕೂಡ ಇದರಲ್ಲಿ ಸೇರಿದ್ದಾರೆ. ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಬಸ್ ಚಾಲಕನೊಂದಿಗೆ ಕೈಕುಲುಕುತ್ತಿರುವುದನ್ನು ಗುರುತಿಸಲಾಗಿದೆ.

    20 ವರ್ಷಗಳ ನಂತರ ಸೇಡು ತೀರಿಸಿಕೊಳ್ಳುವ ಅವಕಾಶ
    20 ವರ್ಷಗಳ ಹಳೆಯ ಸೇಡು ತೀರಿಸಿಕೊಳ್ಳಲು ಭಾರತ ತಂಡಕ್ಕೆ ಉತ್ತಮ ಅವಕಾಶ ಸಿಕ್ಕಿದೆ. 2003ರ ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆದಿತ್ತು. ಆಗ ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡ ಹೀನಾಯ ಸೋಲು ಅನುಭವಿಸಬೇಕಾಯಿತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ 20 ವರ್ಷಗಳ ಸೇಡು ತೀರಿಸಿಕೊಳ್ಳಲು ಉತ್ತಮ ಅವಕಾಶವಿದೆ. 

    ಇಷ್ಟು ದುಬಾರಿ ಕೋ-ಆರ್ಡ್ ಸೆಟ್ ಧರಿಸಿ ಪತಿಯ ಮ್ಯಾಚ್ ನೋಡಿದ ಅನುಷ್ಕಾ, ಬೆಲೆ ಕೇಳಿದ್ರೆ ಆಶ್ಚರ್ಯವಾಗುತ್ತೆ..!

    ಪರ್ಸನಲ್ ಲೋನ್​​​​​ಗೆ ಕಡಿವಾಣ ಹಾಕಲು ಆರ್​​​ಬಿಐ ನಿರ್ಧಾರ; ಇನ್ಮುಂದೆ ಗ್ರಾಹಕರು ಹೆಚ್ಚಿನ ಇಎಂಐ ಪಾವತಿಸಬೇಕಾಗಬಹುದು

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts