World Cup 2023: ಸಚಿನ್ ತೆಂಡೂಲ್ಕರ್​ಗೆ ವಿಶ್ವಕಪ್ 'ಗೋಲ್ಡನ್ ಟಿಕೆಟ್' ನೀಡಿದ ಬಿಸಿಸಿಐ

sachin
Published on

ನವದೆಹಲಿ: ಭಾರತದ ಲೆಜೆಂಡರಿ ಕ್ರಿಕೆಟ್​​ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ 'ಗೋಲ್ಡನ್ ಟಿಕೆಟ್' ಅನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ನೀಡಿದ್ದಾರೆ.

ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯಡಿಯಲ್ಲಿ ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅಹಮದಾಬಾದ್‌ನಲ್ಲಿ ಆರಂಭವಾಗುತ್ತಿದೆ. ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದ್ದು, ಈ ಐಸಿಸಿ ಈವೆಂಟ್​ನಲ್ಲಿ 10 ತಂಡಗಳು ಮುಖಾಮುಖಿಯಾಗುತ್ತಿವೆ. ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net