*ಜಿಲ್ಲಾದ್ಯಂತ ವಿಶ್ವಪರಿಸರ ದಿನಾಚರಣೆ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪರಿಸರ ರಕ್ಷಣೆಗೆ ಮಹತ್ವ ಹಾಗೂ ಪರಿಸರ ನಾಶದಿಂದಾಗುವ ಅನಾಹುತಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ವಿಶ್ವಪರಿಸರ ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಬುಧವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೇವನಹಳ್ಳಿ ಜಿಲ್ಲಾಡಳಿತಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರಿಸರ ದಿನ ಆಚರಣೆಗೆ ಸೀಮಿತವಾಗಬಾರದು. ಅದು ಸಮರ್ಪಕವಾಗಿ ಅನುಷ್ಠಾನಕ್ಕೆ ಬರಬೇಕು, ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಸಂಪೂರ್ಣವಾಗಿ ಕೈಬಿಡಬೇಕು, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ದೊಡ್ಡಮಟ್ಟದಲ್ಲಿ ಜನ ಜಾಗೃತಗೊಳ್ಳಬೇಕು ಎಂದು ಹೇಳಿದರು.
ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಎಲ್ಲೆಡೆ ವಿಶ್ವಪರಿಸರ ದಿನ ಆಚರಿಸಲಾಗುತ್ತಿದೆ. ಇದಕ್ಕೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಹಲವು ಸಂಘ ಸಂಸ್ಥೆಗಳು ಕೈಗೂಡಿಸಿವೆ, ಅರಣ್ಯ ಇಲಾಖೆಯೂ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು ತಿಳಿಸಿದರು.