More

    ಮನುಷ್ಯನ ಸ್ವಾರ್ಥದಿಂದ ಪರಿಸರ ವಿನಾಶ

    ದಾವಣಗೆರೆ: ಮನುಷ್ಯನ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದ್ದು, ಭೂಮಿಯಲ್ಲಿ ಜೀವ ವೈವಿಧ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಮಾನವ ಸಂತತಿ ಹೆಚ್ಚುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

    ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ವಿದ್ಯಾಲಯದಲ್ಲಿ ಸೋಮವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಾಲಿನ್ಯ ಮಂಡಳಿ, ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಪ್ರಾದೇಶಿಕ ಕೇಂದ್ರ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಭೂಮಿ ತಮಗಲ್ಲದೆ ಮುಂದಿನ ಪೀಳಿಗೆಗೂ ಅತ್ಯವಶ್ಯಕ. ಭೂಮಿ ಮೇಲೆ ಬದುಕಲು ಸಕಲ ಜೀವಿಗಳಿಗೂ ಹಕ್ಕಿದೆ. ಮಾನವ ನಿರ್ಮಿತ ವಸ್ತುಗಳನ್ನು ಬಳಸದೇ ನೈಸರ್ಗಿಕವಾಗಿ ಸಿಗುವಂತಹ ಸಂಪನ್ಮೂಲಗಳನ್ನು ಬಳಸಬೇಕು.

    ಗಿಡ ನೆಡುವುದರ ಮೂಲಕ ಪರಿಸರವನ್ನು ನಾವೇ ಸಂರಕ್ಷಿಸೋಣ ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮಕರಣ್ಣವರ ಮಾತನಾಡಿ, ವರ್ಷದಿಂದ ವರ್ಷಕ್ಕೆ ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು, ನೈಸರ್ಗಿಕ ಸಂಪತ್ತನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ.

    ಪ್ಲಾಸ್ಟಿಕ್ ಬಳಕೆಗೆ ಕಾನೂನು ನಿಯಮಗಳನ್ನು ಜಾರಿಗೊಳಿಸಿದರೂ ಬಳಕೆ ನಿಂತಿಲ್ಲ. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್. ತಿಪ್ಪೇಶಪ್ಪ ಮಾತನಾಡಿ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಸಲುವಾಗಿ ಈ ದಿನ 2.5 ಕಿ.ಮೀ ಜಾಥ ಹಮ್ಮಿಕೊಂಡಿದ್ದು, ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಗಿಡ ನೆಡುವ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.

    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಎಚ್. ಲಕ್ಷ್ಮಿಕಾಂತ್, ಬಿಐಇಟಿ ಕಾಲೇಜಿನ ನಿರ್ದೇಶಕ ಪ್ರೊ.ವೈ. ವೃಷಭೇಂದ್ರಪ್ಪ, ಪ್ರಾಚಾರ್ಯ ಎಚ್.ಬಿ.ಅರವಿಂದ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಸ್. ಸುರೇಶ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts