ಪಾಂಡೇಶ್ವರದಲ್ಲಿ ವಿಶ್ವ ಪರಿಸರ ದಿನಾಚರಣೆ

kota (6)
Published on

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟ್ ಬ್ರಹ್ಮಾವರ ತಾಲೂಕು ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಡಬೆಟ್ಟು ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಮುಖ್ಯಶಿಕ್ಷಕಿ ಇಂದಿರಾ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಾಲೂಕಿನ ಕೃಷಿ ಅಧಿಕಾರಿ ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಾಸ್ತಾನ ಒಕ್ಕೂಟದ ಉಪಾಧ್ಯಕ್ಷ ರಮೇಶ್ ಆಚಾರ್ಯ, ಶೌರ್ಯ ಟೀಮ್‌ನ ಸದಸ್ಯರಾದ ರೇಣುಕಾ, ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಶೋಭಾ, ಜ್ಯೋತಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ತಂಡದ ಸದಸ್ಯರು, ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net