

ಹುಣಸೂರು; ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆ ಮೈಸೂರಿನಲ್ಲಿ ದಸರಾ ತಯಾರಿ ಜೋರಾಗಿದ್ದು, ದಸರಾ ಗಜಪಯಣಕ್ಕೆ ಇಂದು ವಿದ್ಯುಕ್ತ ಚಾಲನೆ ನೀಡಲಾಗಿದೆ.
ಇಂದು (ಆ.04)ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಳ್ಳಿಯ ಬಳಿ ಗಜಪಯಣ ಸಮಾರಂಭ ಏರ್ಪಡಿಸಲಾಗಿತ್ತು. ಇನ್ನೂ ಈ ಗಜಪಯಣಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು. ಈ ವೇಳೆ ಸಚಿವ ಕೆ ವೆಂಕಟೇಶ್, ಶಾಸಕರಾದ ಜಿ ಡಿ ಹರೀಶ್ ಗೌಡ, ಡಿ ರವಿಶಂಕರ್, ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು. ವಿವಿಧ ಕಲಾ ತಂಡಗಳ ಜೊತೆ ಕಾಡಿನಿಂದ ನಾಡಿನತ್ತ ದಸರಾ ಆನೆಗಳು ಹೆಜ್ಜೆ ಹಾಕಿದವು. ಗಜಪಯಣ ವೀಕ್ಷಣೆಗೆ ರಸ್ತೆಯ ಎರಡು ಬದಿಯಲ್ಲಿ ಅಪಾರ ಪ್ರಮಾಣದಲ್ಲಿ ಜನರು ಭಾಗಿಯಾಗಿದ್ದರು.
(ಏಜೆನ್ಸೀಸ್)