More

    23ಕ್ಕೆ ಅದ್ದೂರಿ ರೈತ ದಿನ ಆಚರಣೆ

    ಪಾಂಡವಪುರ: ವಿಶ್ವ ರೈತ ದಿನಾಚರಣೆ ಹಾಗೂ ರೈತ ನಾಯಕ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ 75ನೇ ವರ್ಷದ ಜನ್ಮದಿನವನ್ನು ಡಿ.23 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

    ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ವಿಶ್ವೇಶ್ವರಯ್ಯ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಕರೆಯಲಾಗಿದ್ದ ರೈತಸಂಘ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದ ಅವರು, ವಿಶ್ವರೈತ ದಿನಾಚರಣೆ ದಿನವೇ ರೈತನಾಯಕರಾದ ಕೆ.ಎಸ್.ಪುಟ್ಟಣ್ಣಯ್ಯ ಹಾಗೂ ಚರಣ್ ಸಿಂಗ್ ಜನಮ ದಿನವಾಗಿದೆ. ಇಬ್ಬರು ಮಹಾನ್ ನಾಯಕರ ಜನ್ಮ ದಿನಾಚರಣೆಯನ್ನು ಕಾರ್ಯಕರ್ತರು, ಪಕ್ಷದ ಮುಖಂಡರು ಮತ್ತು ಅಭಿಮಾನಿಗಳ ಆಶಯದಂತೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

    ಪಾಂಡವಪುರ ಪಟ್ಟಣದ ಎರಡು ವಾರ್ಡ್‌ಗಳಿಗೆ ಡಿ.27 ರಂದು ಉಪಚುನಾವಣೆ ಘೋಷಣೆಯಾಗಿರುವ ಕಾರಣ ಕಾರ್ಯಕ್ರಮವನ್ನು ಕ್ಯಾತನಹಳ್ಳಿಯಲ್ಲಿ ಆಯೋಜಿಸಲಾಗುವುದು ಎಂದರು.

    ಸಾಹಿತಿ ಚಿಕ್ಕಮರಳಿ ಬೋರೇಗೌಡ ಮಾತನಾಡಿ, ರೈತನಾಯಕ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸಲು ಕಾರ್ಯಕ್ರಮ ರೂಪಿಸಬೇಕಿದೆ. ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಚಳವಳಿಗಳ ಮಹತ್ವ ತಿಳಿಸಲು ಶಿಬಿರ, ಸಂವಾದ, ಚರ್ಚೆಗಳನ್ನು ಆಯೋಜಿಸಿ ಕಾರ್ಯಕ್ರಮ ರೂಪಿಸಬೇಕು ಎಂದರು.

    ಡಿ.27 ರಂದು ನಡೆಯುವ ಉಪಚುನಾವಣೆಯಲ್ಲಿ ರೈತಸಂಘ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರ ಮತಯಾಚಿಸುವಂತೆ ಕರೆ ನೀಡಿದರು. ಈ ಚುನಾವಣೆ ಪ್ರಮುಖದ್ದಾಗಿದ್ದು, ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

    ಜಡ್ಡುಗಟ್ಟಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ, ಜನ ಸಾಮಾನ್ಯರ ಕೆಲಸ ಕಾರ್ಯಗಳಿಗೆ ತೊಡಕಾಗದಂತೆ ಎಚ್ಚರಿಕೆ ನೀಡಬೇಕು. ಅಧಿಕಾರಿಗಳೊಂದಿಗೆ ತುಂಬಾ ಮೃದು ಸ್ವಭಾವದಿಂದ ವರ್ತಿಸಿದರೆ ಕೆಲಸ ಆಗುವುದಿಲ್ಲ. ಜತೆಗೆ ಕಾವೇರಿ ನೀರಿಗಾಗಿ ಹೋರಾಟ ನಡೆಸಿದ ಸಾಕಷ್ಟು ರೈತರ ಮೇಲೆ ಸರ್ಕಾರ ಕೇಸು ದಾಖಲಿಸಿದೆ. ಸರ್ಕಾರದ ಗಮನ ಸೆಳೆದು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಬೇಕು ಎಂದು ಕಾರ್ಯಕರ್ತರು ಮನವಿ ಮಾಡಿದರು.

    ಸಭೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು, ಕಾರ್ಯದರ್ಶಿ ವಿಜಯಕುಮಾರ್, ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಎಸ್.ದಯಾನಂದ, ಚಿಕ್ಕಾಡೆ ವಿಜಯಕುಮಾರ್, ಕೆ.ಟಿ.ಗೋವಿಂದೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts