More

  ಜ್ಞಾನದ ದಿನವಾಗಿ ಆಚರಣೆ

  ಕೊಳ್ಳೇಗಾಲ: ಪಟ್ಟಣದ ಮುಡಿಗುಂಡ ಗ್ರಾಮದಲ್ಲಿ ಡಾ.ಬಿ. ಆರ್.ಅಂಬೇಡ್ಕರ್ ಅಭಿಮಾನಿಗಳ ಬಳಗದಿಂದ ಭಾನುವಾರ ಅಂಬೇಡ್ಕರ್ ಅವರ ಜನ್ಮದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


  ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮಫಲಕಕ್ಕೆ ನಗರಸಭಾ ಸದಸ್ಯೆ ಪುಷ್ಪಲತಾ ಶಾಂತರಾಜು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಅಂಬೇಡ್ಕರ್ ಜಯಂತಿಯನ್ನು ಜ್ಞಾನದ ದಿನವಾಗಿ ಆಚರಣೆ ಮಾಡುತ್ತಿದೆ. ಇಂತಹ ಮಹಾನ್ ವ್ಯಕ್ತಿ ನಮ್ಮ ದೇಶದ ಹೆಮ್ಮೆ. ಅಂಬೇಡ್ಕರ್ ರಚಿಸಿದ ಸಂವಿಧಾನದಡಿ ನಾವೆಲ್ಲರೂ ನಿರ್ಭೀತಿಯಿಂದ ಬದುಕುತ್ತಿದ್ದೇವೆ. ಅವರು ಜ್ಞಾನ ಸಂಪಾದನೆಗೆ ಹೆಚ್ಚು ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.


  ನಗರಸಭೆ ಮಾಜಿ ಸದಸ್ಯ ಶಾಂತರಾಜು, ಅಶೋಕ್ ಮುಡಿಗಂಡ, ಸಾಗರ್, ಮಂಟಯ್ಯ, ರಂಗಸ್ವಾಮಿ, ಗುರುಪ್ರಸಾದ್, ಕುಮಾರ್, ಮಹದೇವ ಮತ್ತಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts