More

    ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ..

    ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂದಗನ್ನಡಿಗರು ಪ್ರತಿ ವರ್ಷ ಆಷಾಢ ಅಮಾವಾಸ್ಯೆಯಂದು ಆಚರಿಸುವ ‘ವಿಶ್ವ ಕುಂದಾಪುರ ಕನ್ನಡ ದಿನ’ ಈ ವರ್ಷ ಜುಲೈ 28ರಂದು ಆಚರಣೆ ಆಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ನಾಳೆ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ನಡೆಯಲಿದೆ.

    ಕುಂದಗನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಕುಂದಾಪುರ ಮೂಲದ ಜನರು 2019ರಿಂದ ವಿಶ್ವದ ಎಲ್ಲೆಡೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಆಷಾಢ ಅಮಾವಾಸ್ಯೆ ದಿನವಾದ ನಾಳೆ (ಜುಲೈ 28) ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಂಗಣಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.

    ಸಂಜೆ ನಾಲ್ಕು ಗಂಟೆಯಿಂದ ಕುಂದಾಪುರ ಭಾಷೆ, ಬದುಕಿನ ಕುರಿತಾದ ಹಲವು ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ವಿಶೇಷವಾಗಿ ಕುಂದಾಪುರ ಆಚಾರ-ಸಂಸ್ಕೃತಿ-ಆಚರಣೆ ಕುರಿತಾದ ಕುಂದಾಪುರ ಕಟ್ಕಟ್ಲೆ, ಕುಂದಾಪ್ರ ಗೀತಗಾಯನ, ಮನು ಹಂದಾಡಿ ಮಾತು, ಚೇತನ್ ನೈಲಾಡಿ ತಂಡದ ಹೆಂಗಸರ ಪಂಚಾಯ್ತಿ, ಕುಶಲವ ಯಕ್ಷಗಾನ, ಕಿರುಚಿತ್ರ ಬಿಡುಗಡೆ ಸೇರಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ ಇರಲಿದೆ.

    ಕಾರ್ಯಕ್ರಮದಲ್ಲಿ ಕುಂದಾಪುರ ಮೂಲದವರಾದ ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು, ಸಿನಿಮಾ ನಿರ್ದೇಶಕ ಯೋಗರಾಜ್ ಭಟ್, ಸಚಿವ ಕೋಟ ಶ್ರೀನಿವಾಸ್ ‌ಪೂಜಾರಿ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ನಟ ಪ್ರಮೋದ್ ಶೆಟ್ಟಿ, ಡಾ.ಭುಜಂಗ ಶೆಟ್ಟಿ ಸೇರಿ ಹಲವರು ಉಪಸ್ಥಿತರಿರಲಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾರಿ ಸಂಖ್ಯೆಯಲ್ಲಿ ಸೇರಲಿದ್ದಾರೆ.

    ಬೆಂಗಳೂರು ಹೊರತಾಗಿ ಉಡುಪಿ ಜಿಲ್ಲೆಯ ಹಲವೆಡೆ ಮತ್ತು ಕುಂದಗನ್ನಡಿಗರು ಸಾಕಷ್ಟು ಸಂಖ್ಯೆಯಲ್ಲಿ ನೆಲೆಸಿರುವ ಇತರ ಪ್ರದೇಶಗಳಲ್ಲೂ ನಾಳೆ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ನಡೆಯಲಿದೆ.

    ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ..

    ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ.. ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ.. ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ..

    ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts