

ಪುತ್ತೂರು ಗ್ರಾಮಾಂತರ: ವಿಶ್ವ ಸಾಕ್ಷರತಾ ದಿನಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಶುಕ್ರವಾರ ಬನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಿಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಉದ್ಘಾಟಿಸಿದರು. ಜಿಲ್ಲಾ ಸ್ವಚ್ಛತಾ ರಾಯಭಾರಿ ಸೀನ ಶೆಟ್ಟಿ ಸಾಕ್ಷರತೆ ಹಾಗೂ ಸ್ವಚ್ಛತಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಸ್ವರ್ಣ ಅಧ್ಯಕ್ಷ ಸುರೇಶ್ ಮಕ್ಕಳ ದೈಹಿಕ ಬೆಳವಣಿಗೆಗೆ ಹೊರಾಂಗಣ ಆಟದ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಇಲಾಖೆಯ ಮೇಲ್ವಿಚಾರಕಿ ಹರಿಣಾಕ್ಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯರಾದ ಜಯ, ಶ್ರೀನಿವಾಸ ಪೆರ್ವೊಡಿ, ತಿಮ್ಮಪ್ಪ ಪೂಜಾರಿ, ರಾಘವೇಂದ್ರ, ಪಿಡಿಒ ಚಿತ್ರಾವತಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣಮೂಲ್ಯ, ಎಸ್ಡಿಎಂಸಿ ಅಧ್ಯಕ್ಷೆ ನಳಿನಿ, ಮುಖ್ಯಶಿಕ್ಷಕ ಪುಷ್ಪಾ ಕೆ., ಪುತ್ತೂರು ಸಾಂತ್ವನ ಕೇಂದ್ರದ ನಿಶಾಪ್ರಿಯ ಮತ್ತಿತರರು ಉಪಸ್ಥಿತರಿದ್ದರು.
ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸ್ವಾತಿ ಸ್ವಾಗತಿಸಿದರು. ನವಸಾಕ್ಷರರಾದ ಸೇಸಪ್ಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ.ನಿರೂಪಿಸಿದರು.