More

    ಪುರುಷರಿಗೆ ಡಬಲ್‌ ಧಮಾಕಾ; ವಿಶ್ವ ಪುರುಷರ ದಿನ… ವಿಶ್ವಕಪ್‌ ಫೈನಲ್‌ ಒಂದೇ ದಿನ…

    ಬೆಂಗಳೂರು: ಇಂದು ಅಂತರಾಷ್ಟ್ರೀಯ ಪುರುಷರ ದಿನ. ಪ್ರತಿ ವರ್ಷ ನವೆಂಬರ್ 19 ರಂದು ಈ ದಿನವನ್ನು ಆಚರಿಸಲಾಗುತ್ತದೆ.  ಇತ್ತ ಕ್ರಿಕೆಟ್ ಹಬ್ಬ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇಂದು ಕ್ರೀಡಾ ಅಭಿಮಾನಿಗಳಾಗಿರುವ ಮಹಿಳೆಯರು, ಮಕ್ಕಳು, ಹಿರಿಯರಿಗೆ ವಿಶೇಷ ದಿನ ಹೌದು… ಆದರೆ ಪುರುಷರಿಗೆ ಈ ದಿನ ಕೊಂಚ ವಿಶೇಷವಾಗಿದೆ…ಯಾಕೆಂದರೆ ಅಂತರಾಷ್ಟ್ರೀಯ ಪುರುಷರ ದಿನ ಹಾಗೂ ವಿಶ್ವಕಪ್​​ ಫೈನಲ್​​ ಒಟ್ಟಿಗೆ ಬಂದಿರುವುದು ಸಂತೋಷದ ವಿಚಾರವಾಗಿದೆ.

    ಒಂದೆಡೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ ದೇಶಕ್ಕೆ ದೇಶವೇ ಕಾಯುತ್ತಿದೆ. ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಲಿವೆ.

    ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಸೆಮಿಫೈನಲ್​ನಲ್ಲಿ ಗೆದ್ದು ಫೈನಲ್​ಗೇರಿರುವ ಉಭಯ ತಂಡಗಳಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿದ್ದು, ಇಂದು ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್‌ ಅಂಬಾನಿ ಅವರ ಕುಟುಂಬ, ಎಂಟು ರಾಜ್ಯಗಳ ಮುಖ್ಯಮಂತ್ರಿಗಳು, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಪತ್ತಿಕಾಂತ ದಾಸ್ ಮತ್ತು ಅನೇಕ ಬಾಲಿವುಡ್ ನಟರು ಪಾಲ್ಗೊಳ್ಳುವ ಸಾಧ್ಯತೆಯಿದೆ.

    ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

    ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

    ಇಂದು ಅಂತರಾಷ್ಟ್ರೀಯ ಪುರುಷರ ದಿನ

    ಪ್ರತಿ ವರ್ಷ ನವೆಂಬರ್ 19 ರಂದು ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಕ್ಕೆ ಮಹಿಳೆಯರು ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಪುರುಷರು ವಹಿಸುವ ಪ್ರಮುಖ ಪಾತ್ರಗಳನ್ನು ನಿರ್ವಹಿಸುವ ಜವಬ್ದಾರಿಯನ್ನು ತೋರಿಸುವ ಅಕ್ಕರೆಯನ್ನು ಗುರುತಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 19 ರಂದು ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಣೆ ಮಾಡಲಾಗುತ್ತದೆ.

    ಅಂತರಾಷ್ಟ್ರೀಯ ಪುರುಷರ ದಿನಾಚರಣೆಯನ್ನು ಮೊದಲ ಬಾರಿಗೆ 1992 ರಲ್ಲಿ ಥಾಮಸ್ ಓಸ್ಟರ್ ಎಂಬವರು ಆಚರಿಸಿದರು ಎಂದು ಹೇಳಲಾಗುತ್ತದೆ. ಸಮಾಜದಲ್ಲಿ ಪುರುಷರು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಅವರು ಜಾರಿಗೆ ತಂದರು. ಆದರೆ ಈ ಆಚರಣೆಗೆ ಅಷ್ಟೇನೂ ಪ್ರೋತ್ಸಾಹ ದೊರೆಯದ ಕಾರಣ 1995 ರಲ್ಲಿ ನಿಲ್ಲಿಸಬೇಕಾಯಿತು.

    ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿನ ವೆಸ್ಟ್‌ ಇಂಡೀಸ್ ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕರಾಗಿದ್ದ, ಡಾ. ಜೆರೋಮ್ ಟೀಲಿಕ್ಸಿಂಗ್ ಅವರು ತಮ್ಮ ತಂದೆಯ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ 1999 ರಲ್ಲಿ ಅಂತರಾಷ್ಟ್ರೀಯ ಪುರುಷರ ದಿನವನ್ನು ಮೊದಲ ಬಾರಿಗೆ ಆಚರಿಸಿದರು. ಈ ದಿನದಂದು ಪುರುಷರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಗುತ್ತದೆ.

    2007 ರ ನವೆಂಬರ್ 19 ರಂದು  ಭಾರತದಲ್ಲಿ ಮೊದಲ ಬಾರಿಗೆ ಅಂತರಾಷ್ಟ್ರೀಯ ಪುರುಷರ ದಿನವನ್ನು ಆರಿಸಲಾಯಿತು. ಹೈದರಾಬಾದ್ ಮೂಲದ ಲೇಖಕಿ ಉಮಾ ಚಲ್ಲಾ ಅವರು 2007 ರಲ್ಲಿ ಇದನ್ನು ಪ್ರಾರಂಭಿಸಿದರು. ಅಂದಿನಿಂದ ಪ್ರತಿವರ್ಷ ನವೆಂಬರ್ 19 ರಂದು ಅಂತರಾಷ್ಟ್ರೀಯ ಪುರುಷರ ದಿನವನ್ನು ಆಚರಿಸಲಾಗುತ್ತದೆ.

    ICC World Cup 2023; ಗುಜರಾತಿ ಖಾದ್ಯಗಳನ್ನು ಜತೆಯಾಗಿ ಸವಿಯಲಿದ್ದಾರೆ ಭಾರತ, ಆಸ್ಟ್ರೇಲಿಯಾ ತಂಡಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts