

ಕಡಬ: ವಿದ್ಯಾರ್ಥಿಗಳು ತಂಬಾಕಿನಿಂದ ದೂರವಿದ್ದು, ನೆಮ್ಮದಿಯ ಜೀವನ ನಡೆಸಬೇಕು ಎಂದು ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಹಾಗೂ ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಾರಿ ನಿರ್ದೇಶನಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಮಹೇಶ್ ಕಜೆ ಜಾಗೃತಿ ಮೂಡಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಪದ್ಮಾವತಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ರು ಬಿ.ಆರ್., ಜಿಲ್ಲಾ ಯುವಜನಾ ಒಕ್ಕೂಟ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂರಿಮುಳ್ಳು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ತಾರಾನಾಥ ಕಾಯರ್ಗ, ಶಿಕ್ಷಕರಾದ ಮಮಚನ್, ರಾಜಶೇಖರ್, ಸೇವಾ ಪ್ರತಿನಿಧಿ ಅಮಿತಾ, ಜನಜಾಗೃತಿ ಸದಸ್ಯರಾದ ಲೋಕನಾಥ ವಜ್ರಗಿರಿ, ಚೇತನ್ ಕೋಡಿಬೈಲ್, ವಕೀಲ ಅಜಿತ್ ಮೊದಲಾದವರಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಕಿಶನ್ ಬಿ.ವಿ. ನಿರೂಪಿಸಿದರು. ವಲಯ ಮೇಲ್ವಿಚಾರಕಿ ವೀಣಾ ಕೆ. ವಂದಿಸಿದರು.