ಬಚ್ಚಪ್ಪು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ

no tobacco
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಕಾರ್ಯಕ್ರಮ ಬಚ್ಚಪ್ಪು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಜತೆಗೆ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಅಸ್ವಸ್ಥತೆ ಹೊಂದುವುದನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಒಂದು ಸಿಗರೇಟ್ ನಮ್ಮ ಮೂರು ನಿಮಿಷ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ತಂಬಾಕಿನಿಂದ ದೂರವಿರಿ ಎಂದು ಸಮುದಾಯ ಆರೋಗ್ಯ ಅಧಿಕಾರಿ ಪೂರ್ಣಿಮಾ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಚ್ಚಪ್ಪು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಜಾಗೃತಿ ವೇದಿಕೆ ಹೆಬ್ರಿ ವಲಯ ಅಧ್ಯಕ್ಷ ನರೇಂದ್ರ ನಾಯಕ್ ಮಾತನಾಡಿ, ತಂಬಾಕು ಸೇವನೆಯಿಂದ ಪ್ರತಿ ವರ್ಷ ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಗ್ರಾಪಂ ಸದಸ್ಯೆ ರೇವತಿ, ಒಕ್ಕೂಟದ ಅಧ್ಯಕ್ಷ ಉದಯ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಚಂದ್ರಾವತಿ, ವಲಯ ಮೇಲ್ವಿಚಾರಕ ಎಚ್.ಉದಯ್, ವಿಜಯ್ ಶೆಟ್ಟಿ, ಕಾಂತಿ ಹೆಗ್ಡೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net