

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಯುವ ಸಮುದಾಯ ತಂಬಾಕು ಸೇವನೆಯಂಥ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಪಿ.ಕೆ.ರಾಜು ಪೂಜಾರಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಗುರುವಾಯನಕೆರೆ, ಸರ್ಕಾರಿ ಪ್ರೌಢಶಾಲೆ ನಾರಾವಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ನಾರಾವಿ ವಲಯ ಸಂಯುಕ್ತ ಆಶ್ರಯದಲ್ಲಿ ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಜನ ಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಹೆಗ್ಡೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮುಖ್ಯಶಿಕ್ಷಕಿ ಸುಶೀಲಾ, ನಾರಾವಿ ಗ್ರಾಪಂ ಅಧ್ಯಕ್ಷ ರಾಜವರ್ಮ ಜೈನ್, ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ನಿಯೋಜಿತ ಕಾರ್ಯದರ್ಶಿ ಕಿರಣ್ ಶೆಟ್ಟಿ, ಜನ ಜಾಗೃತಿ ವೇದಿಕೆ ನಾರಾವಿ ವಲಯ ಅಧ್ಯಕ್ಷ ನಿತ್ಯಾನಂದ ನಾವರ, ಸದಸ್ಯೆ ವಸಂತ ಗುಣಶೀಲ, ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಬಂಗೇರಾ, ಗ್ರಾಮ ಸಮಿತಿ ಅಧ್ಯಕ್ಷ ರಾಮ ಶೆಟ್ಟಿ ಜಗದೀಶ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷ ಸುರೇಶ್ ದಾಸ್, ಮೇಲ್ವಿಚಾರಕಿ ದಮಯಂತಿ, ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ರೇಷ್ಮಾ, ಮಮತಾ ಶೆಟ್ಟಿ ಉಪಸ್ಥಿತರಿದ್ದರು.
ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ದುಶ್ಚಟ ದುರಾಭ್ಯಾಸ ಹೋಗಲಾಡಿಸುವ ಉದ್ದೇಶದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಜನ ಜಾಗೃತಿ ವೇದಿಕೆ ಕಟ್ಟಿದ್ದಾರೆ. ಇದರಿಂದ ಸಾಕಷ್ಟು ಸಮಾಜ ಪರಿವರ್ತನೆ ಕಾರ್ಯಕ್ರಮ ನಡೆದಿದ್ದು ಸಾವಿರಾರು ಕುಟುಂಬಗಳಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ.- ಪಿ.ಕೆ.ರಾಜು ಪೂಜಾರಿಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ