ಆಧುನಿಕ ಜೀವನ ಶೈಲಿಯಿಂದ ಪರಿಸರ ಮಾಲಿನ್ಯ : ಡಾ.ಸುಯೋಗ ವರ್ಧನ್ ಅನಿಸಿಕೆ

ocone day
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಮನುಷ್ಯನ ಆಧುನಿಕ ಜೀವನ ಶೈಲಿಯಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು ಇದರಿಂದ ಓಜೋನ್ ಪದರ ಕ್ಷೀಣಿಸುತ್ತಿದೆ ಎಂದು ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲ ಡಾ.ಸುಯೋಗ ವರ್ಧನ್ ಡಿ.ಎಂ.ಹೇಳಿದರು.

ಕಾಲೇಜಿನ ವಿಜ್ಞಾನ ವೇದಿಕೆ ಹಾಗು ಐ.ಕ್ಯೂ.ಎ.ಸಿ ಸಹಯೋಗದಲ್ಲಿ ನಡೆದ ವಿಶ್ವ ಓಜೋನ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಸೆಪ್ಟೆಂಬರ್ 16 ಅನ್ನು ವಿಶ್ವ ಓಜೋನ್ ದಿನ ಎಂದು ಆಚರಿಸಲಾಗುತ್ತಿದೆ. ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಕುರಿತಾಗಿ ಈ ದಿನವನ್ನು ಆಚರಿಸಲಾಗುತ್ತಿದ್ದು, ಓಜೋನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ಎಲ್ಲರೂ ಹೆಚ್ಚು ಗಿಡಮರಗಳನ್ನು ಬೆಳೆಸುವುದರ ಮೂಲಕ ಓಜೋನ್ ಪದರವನ್ನು ಸಂರಕ್ಷಣೆ ಮಾಡೋಣ ಎಂದು ತಿಳಿಸಿದರು.

ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಕೆ.ಎಸ್.ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀದೇವಿ ವಂದಿದರು. ಹೇಮಲತಾ ನಿರೂಪಿಸಿದರು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುದರ್ಶನ್ ಬಿ.ಹಾಗೂ ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net