

ವಿಜಯಪುರ : ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಗಳ ಸಂಯುಕ್ತಾಶ್ರಯದಲ್ಲಿ ಆ. 18 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ, ಹಿರಿಯ ಛಾಯಾಗ್ರಾಹಕರಿಗೆ ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಛಾಯಾಚಿತ್ರಗಳ ಪ್ರದರ್ಶನ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10.30ಕ್ಕೆ ನಡೆಯುವ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮವನ್ನು ಯುವ ಭಾರತ ಸಮಿತಿ ಅಧ್ಯಕ್ಷ ಉಮೇಶ ಕಾರಜೋಳ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಬೆಂಗಳೂರಿನ ಕೆಪಿಎ ನಿರ್ದೇಶಕ ನಾಗರಾಜ ಟಿ.ಸಿ., ಸಿಂದಗಿಯ ಯುವ ಮುಖಂಡರಾದ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಿ), ಎಸ್.ಬಿ. ವಿಸ್ಡಮ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಆಗಮಿಸುವರು. ಜಿಲ್ಲಾ ನೂತನ ಛಾಯಾಗ್ರಾಹಕರ ಸಂದ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯು ತಿಳಿಸಿದೆ.