

ಸುಬ್ರಹ್ಮಣ್ಯ: ಜನಸಂಖ್ಯೆ ನಿಯಂತ್ರಣಕ್ಕಾಗಿ ಸರ್ಕಾರ ಕುಟುಂಬ ಕಲ್ಯಾಣ ಯೋಜನೆ ಅನ್ವಯ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆರೋಗ್ಯ ಕಾರ್ಯಕರ್ತರು ಮನೆಗೆ ಬಂದಾಗ ಅವರಿಗೆ ಸ್ಪಂದಿಸುವುದು ಅಗತ್ಯ. ಜನಸಂಖ್ಯೆ ನಿಯಂತ್ರಣ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಸುಳ್ಯ ತಾಲೂಕು ಪಂಚಾಯಿತಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಸ್.ಎಸ್. ಪಿಯು ಕಾಲೇಜು ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಆಶ್ರಯದಲ್ಲಿ ಶುಕ್ರವಾರ ಸುಬ್ರಹ್ಮಣ್ಯದ ಎಸ್.ಎಸ್. ಪಿಯು ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ, ಎಸ್.ಎಸ್. ಪಿಯು ಕಾಲೇಜು ಪ್ರಾಚಾರ್ಯ ಸೋಮಶೇಖರ್ ನಾಯಕ್, ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ಜಯಪ್ರಕಾಶ್ ಆರ್., ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಪ್ರೊ.ಕೆ.ಆರ್.ಶೆಟ್ಟಿಗಾರ್, ಪಂಜ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಜಯಪ್ರಕಾಶ್ ಆರ್. ಸ್ವಾಗತಿಸಿದರು. ಉಪನ್ಯಾಸಕಿ ಶ್ರುತಿ ಅಶ್ವಥ್ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ವಂದಿಸಿದರು.
ಸನ್ಮಾನ
ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಕಾಂತರಾಜು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ, ಪ್ರಥಮ ದರ್ಜೆ ಸಹಾಯಕ ಅರುಣೋದಯ ಅವರನ್ನು ಸನ್ಮಾನಿಸಲಾಯಿತು.