More

    ಜನಸಂಖ್ಯೆ ಹೆಚ್ಚಳದಿಂದ ಹಲವು ಸಮಸ್ಯೆ: ಜಿಲ್ಲಾಧಿಕಾರಿ ಡಾ.ಕುಮಾರ ಅಭಿಮತ

    ಮಂಡ್ಯ: ಜನಸಂಖೆ ಹೆಚ್ಚಳದಿಂದ ಆಹಾರ, ನೀರು, ವಸತಿ ಸೇವೆಗಳು ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದವರು. ಪಾಲಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡಬೇಕು. ಯುವ ಜನತೆಯ ಸಬಲೀಕರಣ ಮತ್ತು ಶಿಕ್ಷಣ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮ ನಿರಂತರವಾಗಿರಬೇಕು ಎಂದರು
    ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಪ್ರತಿದಿನ ಒಂದೊಂದು ತಾಲೂಕಿಗೆ ಜಾಗೃತಿ ವಾಹನ ಭೇಟಿ ನೀಡಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
    ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆಶಾಲತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts