More

    ಪಂಜಾಬ್​-ಕಲ್ಕತ್ತಾ ಬ್ಯಾಟ್ಸ್​​ಮನ್​ಗಳ ಸಿಡಿಲಬ್ಬರಕ್ಕೆ ದಾಖಲೆಗಳು ಉಡೀಸ್​; ಸಿಕ್ಸರ್​ಗಳ ಸುರಿಮಳೆಗೆ ನಿರ್ಮಾಣವಾಯ್ತು ವಿಶ್ವದಾಖಲೆ

    ಕಲ್ಕತ್ತಾ: ಇಲ್ಲಿನ ಈಡನ್​ ಗಾರ್ಡನ್​ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 42ನೇ ಐಪಿಎಲ್​ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ ಫಲವಾಗಿ ಪಂಜಾಬ್​ ಕಿಂಗ್ಸ್​ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಬೃಹತ್​ ಗುರಿಯನ್ನು 8 ಎಸೆತಗಳು ಬಾಕಿ ಇರುವಂತೆಯೇ ಚೇಸ್​ ಮಾಡಿದ ಪಂಜಾಬ್​ ಕಿಂಗ್ಸ್​ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದು, ವಿಶ್ವದಾಖಲೆಯನ್ನು ನಿರ್ಮಾಣ ಮಾಡಿದೆ.

    262 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕರಾದ ಪ್ರಭ್​ಸಿಮ್ರಾನ್ ಸಿಂಗ್ (50) ಹಾಗೂ ಜಾನಿ ಬೈರ್​ಸ್ಟೋವ್ ಸಿಡಿಲಬ್ಬರದ ಆರಂಭ ಒದಗಿಸಿದರು. ಕಲ್ಕತ್ತಾ ಬೌಲರ್​ಗಳನ್ನು ಇನ್ನಿಲ್ಲದಂತೆ ಕಾಡಿದ ಪಂಜಾಬ್​ ಬ್ಯಾಟ್ಸ್​ಮನ್​ಗಳು ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 18.4 ಓವರ್​ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 2 ವಿಕೆಟ್ ಕಳೆದುಕೊಂಡು 262 ರನ್​ಗಳ ಗುರಿ ಮುಟ್ಟಿತು.

    ವಿಶೇಷ ಎಂದರೆ ಬೃಹತ್​ ಗುರಿ ಬೆನ್ನತ್ತುವ ಮೂಲಕ ಪಂಜಾಬ್ ಕಿಂಗ್ಸ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬೆನ್ನಟ್ಟಿ ಗೆದ್ದ ತಂಡ ದಾಖಲೆ ಇದೀಗ ಪಂಜಾಬ್ ಕಿಂಗ್ಸ್ ಪಾಲಾಗಿದೆ. ಇದಕ್ಕೂ ಮುನ್ನ 2023ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 259 ರನ್​ಗಳನ್ನು ಚೇಸ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಈ ವಿಶ್ವ ದಾಖಲೆ ಬರೆದಿತ್ತು. ಇದೀಗ ದಾಖಲೆಯನ್ನು ಮುರಿಯುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ.

    Shashank bairstow

    ಇದನ್ನೂ ಓದಿ: ಯೂನಿವರ್ಸಿಟಿಗಳ ಬ್ಯಾಂಕ್​ ಖಾತೆ ಸ್ಥಗಿತ; ಆರ್​ಬಿಐಗೆ ದೂರು ನೀಡಿದ ಎಬಿವಿಪಿ

    ಕಲ್ಕತ್ತಾ ಹಾಗೂ ಪಂಜಾಬ್​ ನಡುವಿನ ಪಂದ್ಯದಲ್ಲಿ ಒಟ್ಟು 42 ಸಿಕ್ಸರ್​ಗಳನ್ನು ಸಿಡಿಸಲಾಗಿದ್ದು, ಈ ಸಿಕ್ಸ್​ಗಳಿಂದಲೇ ಇದೀಗ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ 18.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ಪಾಲಾಗಿದೆ. 

    ಅಂದರೆ ಈ ಪಂದ್ಯದಲ್ಲಿ ಒಟ್ಟು 42 ಸಿಕ್ಸರ್​ಗಳನ್ನು ಸಿಡಿಸಲಾಗಿದ್ದು, ಅದರಲ್ಲಿ ಪಂಜಾಬ್​ ಬ್ಯಾಟ್ಸ್​ಮನ್​ಗಳು 24 ಸಿಕ್ಸ್​ ಸಿಡಿಸಿದರೆ, ಕಲ್ಕತ್ತಾ ಬ್ಯಾಟರ್​ಗಳು 18 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಉಭಯ ತಂಡಗಳ ಆಟಗಾರರು ಸಿಡಿಸಿದ ಈ ಸಿಕ್ಸ್​ಗಳಿಂದಾಗಿ ಇದೀಗ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ.

    ಇದಕ್ಕೂ ಮುನ್ನ ಈ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. 17ನೇ ಆವೃತ್ತಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್​ ನಡುವಣ ಪಂದ್ಯದಲ್ಲಿ ಒಟ್ಟು 38 ಸಿಕ್ಸ್​ಗಳು ಮೂಡಿಬಂದಿದ್ದವು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಯಶಸ್ವಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts