More

    ಹೆಚ್ಚುತ್ತಿರುವ ತಂಬಾಕು ಬಳಕೆಯ ವ್ಯಸನಿಗಳು: ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ ಬೇಸರ

    ಮಂಡ್ಯ: ಅನಾರೋಗ್ಯಕರವೆಂದು ಗೊತ್ತಿದ್ದರೂ ದಿನೇ ದಿನೇ ತಂಬಾಕು ಬಳಕೆಯ ವ್ಯಸನಿಗಳು ಹೆಚ್ಚಾಗುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ ಹೇಳಿದರು.
    ನಗರದ ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪಿಇಎಸ್ ಕಾನೂನು ಕಾಲೇಜು ಮತ್ತು ಕಾನೂನು ಸೇವಾ ಘಟಕ, ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜು ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮನುಷ್ಯನಿಗೆ ತಂಬಾಕು ಅನಿವಾರ್ಯವಲ್ಲ. ಸೇವನೆ ಮಾಡಲೇಬೇಕು, ಅದರಿಂದ ಏನೋ ಒಂದು ಆಗುತ್ತದೆ ಎನ್ನುವ ಭಾವನೆ ಬಿಟ್ಟು ವ್ಯಸನಮುಕ್ತ ಜೀವನ ನಡೆಸುವುದು ಸೂಕ್ತ. ಕೋಟ್ಯಂತರ ಜನರು ತಂಬಾಕು, ಆಲ್ಕೋಹಾಲ್ ಇಲ್ಲದೆ ನೆಮ್ಮದಿ, ಖುಷಿಯಲ್ಲಿ ಬದುಕು ನಡೆಸುತ್ತಿದ್ದಾರೆ ಎಂದರು.
    ಇದೇ ಸಂದರ್ಭದಲ್ಲಿ ಮಿಮ್ಸ್ ಮನೋವೈದ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಕೆ.ಎಸ್.ಅಶೋಕ್‌ಕುಮಾರ್ ‘ನಮಗೆ ಆಹಾರ ಬೇಕು ತಂಬಾಕು ಅಲ್ಲ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. ಪ್ರಾಂಶುಪಾಲ ಡಾ.ಜೆ.ಮಹದೇವ, ವಕೀಲರ ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಹಾಯಕ ಪ್ರಾಧ್ಯಾಪಕ ಕೆ.ಎಸ್.ಜಯಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts