More

    ವಿಶ್ವದಲ್ಲೇ ಇದು ಒಮಿಕ್ರಾನ್​ನಿಂದಾದ ಮೊದಲ ಸಾವು; ರೂಪಾಂತರಿ ವೈರಸ್​ ಇದೀಗ ಮತ್ತಷ್ಟು ಆತಂಕಕಾರಿ!

    ಲಂಡನ್​: ರೂಪಾಂತರಿ ವೈರಸ್​ ಒಮಿಕ್ರಾನ್ ವ್ಯಾಪಕವಾಗಿ ಹರಡಿದರೂ ಅದರ ರೋಗಲಕ್ಷಣಗಳು ಗಂಭೀರವಲ್ಲ ಎಂಬ ಸಮಾಧಾನದ ಸಂಗತಿಗಳ ನಡುವೆಯೇ ಜಗತ್ತಿನಾದ್ಯಂತ ಒಮಿಕ್ರಾನ್​ ಸೋಂಕಿನ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಈ ನಡುವೆ ಒಮಿಕ್ರಾನ್​ನಿಂದಾದ ಮೊದಲ ಸಾವು ಕೂಡ ದೃಢಪಟ್ಟಿದ್ದು, ರೂಪಾಂತರಿ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾದಂತಾಗಿದೆ.

    ಒಮಿಕ್ರಾನ್​ನಿಂದ ಸಂಭವಿಸಿದ, ಜಗತ್ತಿನಲ್ಲೇ ಮೊದಲನೆಯದು ಎನ್ನಬಹುದಾದ ಸಾವು ಲಂಡನ್​ನಲ್ಲಿ ವರದಿಯಾಗಿದೆ. ಯುನೈಟೆಡ್ ಕಿಂಗ್​ಡಮ್​ ಪ್ರಧಾನಿ ಬೋರಿಸ್​ ಜಾನ್ಸನ್​ ಅವರೇ ಸೋಮವಾರ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಎಚ್ಚರ.. ಎಚ್ಚರ.. ಹೊರಗೆಲ್ಲೂ ಹೋಗದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೂ ಬಂದಿದೆ ಒಮಿಕ್ರಾನ್​!

    ಹೊಸ ರೂಪಾಂತರಿ ಒಮಿಕ್ರಾನ್​ ವೈರಸ್​ ಒಟ್ಟಾರೆ ಕರೊನಾ ಸೋಂಕಿನ ಪ್ರಕರಣಗಳ ಪೈಕಿ ಶೇ. 50ರಷ್ಟಾಗುವ ಸಾಧ್ಯತೆ ಸಮೀಪಿಸಿದೆ. ಮಾತ್ರವಲ್ಲ, ಒಮಿಕ್ರಾನ್​ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆ ಪೈಕಿ ಒಬ್ಬರು ಒಮಿಕ್ರಾನ್​ನಿಂದ ಸಾವಿಗೀಡಾಗಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

    ಇದನ್ನೂ ಓದಿ: ಯಾವ ಗುಂಪಿನ ರಕ್ತದವರಿಗೆ ಕೋವಿಡ್ ಸೋಂಕು ತಗುಲುವ ಸಾಧ್ಯತೆ ಅಧಿಕ?; ಇಲ್ಲಿದೆ ನೋಡಿ ಮಾಹಿತಿ…

    ಲಂಡನ್​​ನಲ್ಲಿ ಸದ್ಯ ಒಟ್ಟಾರೆ ಕರೊನಾ ಪ್ರಕರಣಗಳ ಪೈಕಿ ಶೇ. 40ರಷ್ಟು ಒಮಿಕ್ರಾನ್ ಪ್ರಕರಣಗಳಾಗಿವೆ. ಲಂಡನ್ ಮಾತ್ರವಲ್ಲದೆ ದೇಶದ ಇತರ ಪ್ರದೇಶಗಳಲ್ಲೂ ಒಮಿಕ್ರಾನ್​ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಕಂಡುಬರಲಾರಂಭಿಸಿವೆ ಎಂದು ಅವರು ಹೇಳಿದ್ದಾರೆ.
    -ಏಜೆನ್ಸೀಸ್

    ಒಮಿಕ್ರಾನ್​ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!

    ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಪತ್ನಿ ವಾಪಸ್ ಬಂದಿಲ್ಲ ಎಂದು ಪತಿ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts