ಅನಾಕೊಂಡಾವನ್ನೇ ಮೀರಿಸುವ ವಿಶ್ವದ ಅತಿದೊಡ್ಡ ಕಾಳಿಂಗ ಸರ್ಪ: ಈ ಥ್ರಿಲ್ಲಿಂಗ್​ ವಿಡಿಯೋ ಮಿಸ್​ ಮಾಡ್ಕೋಬೇಡಿ! King Cobra

King Cobra
Published on

King Cobra : ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾವಿರಾರು ವಿಡಿಯೋಗಳು ಹರಿದಾಡುತ್ತಿರುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವೇ ಕೆಲವು ವಿಡಿಯೋಗಳು ವಿಶೇಷ ಕಾರಣಕ್ಕೆ ನೆಟ್ಟಿಗರ ಗಮನವನ್ನು ಸೆಳೆದು ಕ್ಷಣಾರ್ಧದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರಿಕೊಂಡಿದೆ.

ಹಾವುಗಳೆಂದರೆ ಮನುಷ್ಯನಿಗೆ ವಿಶೇಷ ಆಸಕ್ತಿ. ಹಾವನ್ನು ಕಂಡರೆ ಭಯಪಟ್ಟರು ಕೂಡ ಹಾವಿನ ಬಗ್ಗೆ ತಿಳಿದುಕೊಳ್ಳಲು ಭಾರಿ ಕುತೂಹಲವೊಂದಿರುತ್ತಾನೆ. ಹೀಗಾಗಿ ಹಾವಿಗೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ಜಾಲತಾಣದಲ್ಲಿ ವೈರಲ್​ ಆಗಿ, ನೆಟ್ಟಿಗರ ಗಮನ ಸೆಳೆಯುತ್ತದೆ. ಅದೇ ರೀತಿ ಹಾವೊಂದರ ವಿಡಿಯೋ ಇದೀಗ ವೈರಲ್​ ಆಗಿದ್ದು, ಅದನ್ನು ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಹೌದು, ಅನಾಕೊಂಡಾ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ನಿಂತಿರುವ ವ್ಯಕ್ತಿಯೊಬ್ಬನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇಷ್ಟು ದೊಡ್ಡ ಗಾತ್ರದ ಕಾಳಿಂಗ ಸರ್ಪವನ್ನೇ ನೋಡಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಅಂದಹಾಗೆ, ಜಗತ್ತಿನ ಅತ್ಯಂತ ವಿಷಕಾರಿ ಹಾವುಗಳಲ್ಲಿ ಕಾಳಿಂಗ ಸರ್ಪವೂ ಒಂದು. ಈ ಹಾವುಗಳು, ಹಾವುಗಳನ್ನೇ ಆಹಾರವಾಗಿ ತಿನ್ನುತ್ತವೆ. ಇವು ಸಾಮಾನ್ಯವಾಗಿ ಸುಮಾರು 12 ಅಡಿಗಳಷ್ಟು ಮಾತ್ರ ಬೆಳೆಯುತ್ತದೆ. ಆದರೆ, ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವ್ಯಕ್ತಿಯ ಕೈಯಲ್ಲಿರುವ ಕಾಳಿಂಗ ಸರ್ಪ ದೈತ್ಯ ಅನಾಕೊಂಡಾದಷ್ಟು ದೊಡ್ಡದಾಗಿದೆ.

ವಿಡಿಯೋ ವೈರಲ್​ ಆಗಿದ್ದು, ಅದನ್ನು ನೋಡಿದ ನೆಟ್ಟಿಗರು ವಿಡಿಯೋವನ್ನು ಪ್ರಶ್ನಿಸುತ್ತಿದ್ದಾರೆ. ಇದೊಂದು ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಿದ ವಿಡಿಯೋ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ, ಜಗತ್ತಿನಲ್ಲಿ ಇಷ್ಟು ದೊಡ್ಡ ಕಾಳಿಂಗ ಸರ್ಪ ಇಲ್ಲ ಎಂದು ಹೇಳುತ್ತಿದ್ದಾರೆ.

ಆದರೆ, ಆ ವ್ಯಕ್ತಿಯ ಕೈಯಲ್ಲಿರುವ ಕಾಳಿಂಗ ಸರ್ಪ ನಿಜವಾದ ಹಾವಿನಂತೆಯೇ ಕಾಣುತ್ತಿರುವುದರಿಂದ ಅನೇಕ ಜನರು ಈ ವಿಡಿಯೋವನ್ನು ಸಿಕ್ಕಾಪಟ್ಟೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ನೋಡಿ ನಿಮಗೆ ಏನು ಅನಿಸಿತು ಎಂಬುದನ್ನು ಕಾಮೆಂಟ್​ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net